-->
ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಕಾಫಿ ಎಸ್ಟೇಟ್ ಮಾಲಕ ಸೇರಿದಂತೆ ಮೂವರು ಅರೆಸ್ಟ್

ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಕಾಫಿ ಎಸ್ಟೇಟ್ ಮಾಲಕ ಸೇರಿದಂತೆ ಮೂವರು ಅರೆಸ್ಟ್

ಹಾಸನ: ಇಲ್ಲಿನ ಸಕಲೇಶಪುರ ತಾಲೂಕಿನ ಗ್ರಾಮವೊಂದರ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ಎಸಗಿ ಗರ್ಭ ಧರಿಸಲು ಕಾರಣರಾದ ಮೂವರು ಆರೋಪಿಗಳನ್ನು ಮಂಗಳವಾರ ಸಕಲೇಶಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಅದೇ ಗ್ರಾಮದ ಸ್ವಾಗತ್, ಸುದರ್ಶನ್ ಹಾಗೂ ಪಾಪಣ್ಣ ಎಂಬುವರನ್ನು ಬಂಧಿತ ಆರೋಪಿಗಳು. ಈ ಮೂವರು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಹಲವು ತಿಂಗಳ ಬಳಿಕ ಬಾಲಕಿ ಗರ್ಭ ಧರಿಸಿದ ಬಳಿಕ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ.

ಮೂವರು ಆರೋಪಿಗಳು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರೂ ಆಕೆ ತನ್ನ ಪೋಷಕರಿಗೆ ಹೆದರಿ ವಿಷಯವನ್ನು ಬಹಿರಂಗಪಡಿಸಿಲ್ಲ. ಅಲ್ಲದೇ ದುಷ್ಕರ್ಮಿಗಳು ಸಂತ್ರಸ್ತ ಬಾಲಕಿಗೆ ಈ ವಿಚಾರ ಬಹಿರಂಗಪಡಿಸಿದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಈ ಅತ್ಯಾಚಾರ ಪ್ರಕರಣದಲ್ಲಿ ಬಾಲಕಿಯ ಕುಟುಂಬ ಕೆಲಸ ಮಾಡುತ್ತಿದ್ದ ಕಾಫಿ ಎಸ್ಟೇಟ್ ಮಾಲಕ ಸೇರಿದಂತೆ ಮೂವರು ಆಕೆಯ ಪೋಷಕರು ಹೊರಗೆ ಹೋದಾಗ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

Ads on article

  

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article