ಸುರತ್ಕಲ್: ಕಾಟಿಪಳ್ಳ ಜಲೀಲ್ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಅರೆಸ್ಟ್


ಸುರತ್ಕಲ್: ಕೃಷ್ಣಾಪುರದ ಕಾಟಿಪಳ್ಳ ನಿವಾಸಿ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ ನಾಲ್ಕಕ್ಕೇರಿದೆ.

ಕಾಟಿಪಳ್ಳ 4ನೇ ಬ್ಲಾಕ್ ನಿವಾಸಿ ಲಕ್ಷ್ಮೀಶ ದೇವಾಡಿಗ (28) ಬಂಧಿತ ಆರೋಪಿ.

ಶನಿವಾರ ರಾತ್ರಿ 8:30ರ ಸುಮಾರಿಗೆ ಜಲೀಲ್ ರನ್ನು ಕಾಟಿಪಳ್ಳ 4ನೇ ಬ್ಲಾಕ್‌ನ ನೈತಂಗಡಿ ಎಂಬಲ್ಲಿನ ಅವರ ಫ್ಯಾನ್ಸಿ ಅಂಗಡಿಯಲ್ಲಿರುವಾಗಲೇ ಚೂರಿಯಿಂದ ಇರಿದು ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ನಡೆದು 24 ಗಂಟೆಗಳೊಳಗೆ ಮೂವರು ಆರೋಪಿಗಳನ್ನು ಕಾಪುವಿನ ಲಾಡ್ಜ್ ನಲ್ಲಿ ಬಂಧಿಸಿದ್ದರು. ಇಂದು ಮತ್ತೋರ್ವ ಆರೋಪಿ ಲಕ್ಷ್ಮೀಶ ದೇವಾಡಿಗನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಕೃಷ್ಣಾಪುರ ಜಲೀಲ್ ಕೊಲೆ ಪ್ರಕರಣದಲ್ಲಿ ಸುರತ್ಕಲ್ ಪೊಲೀಸರು ಒಟ್ಟು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.
BREAKING NEWS
Loading latest news...
Join our WhatsApp Channel Powered By : Online Pudu