-->

ಒಂಟಿ ಮನೆಗಳನ್ನೇ ಟಾರ್ಗೆಟ್ ಮಾಡಿ ದೋಚುತ್ತಿದ್ದ ಖತರ್ನಾಕ್ ದಂಪತಿಯನ್ನು ಬಂಧಿಸಿದ ಪೊಲೀಸರು

ಒಂಟಿ ಮನೆಗಳನ್ನೇ ಟಾರ್ಗೆಟ್ ಮಾಡಿ ದೋಚುತ್ತಿದ್ದ ಖತರ್ನಾಕ್ ದಂಪತಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರು: ಒಂಟಿ ಮನೆಗಳನ್ನೇ ಟಾರ್ಗೆಟ್ ಮಾಡಿ ಕಳವು ಮಾಡುತ್ತಿದ್ದ ಖತರ್ನಾಕ್ ದಂಪತಿಯನ್ನು ಬೆಂಗಳೂರಿನ ಜ್ಞಾನಭಾರತಿ ಠಾಣಾ ಪೊಲೀಸರು ಕಂಬಿ ಹಿಂದೆ ತಳ್ಳಿದ್ದಾರೆ.

ನಾಗರಾಜ ಹಾಗೂ ರಮ್ಯಾ ಬಂಧನಕ್ಕೊಳಗಾದ ದಂಪತಿ.

ಬೈಕ್ ಕಳ್ಳನೋರ್ವನ ಮೂಲಕ ನಾಗರಾಜ್ ಹಾಗೂ ರಮ್ಯಾ ನಡುವೆ ಪರಿಚಯ ಬೆಳೆದಿತ್ತು. ಆ ನಂತರ ಇವರಿಬ್ಬರ ಮಧ್ಯೆ ಸ್ನೇಹ ಬೆಳೆದಿತ್ತು. ದಿನಕಳೆದಂತೆ ಇಬ್ಬರ ಸ್ನೇಹ ಪ್ರೇಮಕ್ಕೆ ತಿರುಗಿ ಮದುವೆಯೂ ಆಗಿತ್ತು.

ಮದುವೆಯಾದ ಬಳಿಕ ಇಬ್ಬರು ಒಟ್ಟಿಗೆ ಕಳ್ಳತನ ಮಾಡಲು ಆರಂಭಿಸಿದರು. ಒಂಟಿ ಮನೆಗಳನ್ನು ಟಾರ್ಗೆಟ್ ಮಾಡಿ ದೋಚುತ್ತಿದ್ದರು. ಇದೀಗ ಈ ದಂಪತಿಯನ್ನು ಪೊಲೀಸರ ಬಂಧಿಸಿದ್ದಾರೆ. ಬಂಧಿತರಿಂದ 5.25 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article