ಮಂಗಳೂರು: ಬಸ್ ಢಿಕ್ಕಿಯಾಗಿ ಮಹಿಳಾ ಟೆಕ್ಕಿ ಮೃತಪಟ್ಟ ಪ್ರಕರಣ ಡ್ರೈವರ್ ಅರೆಸ್ಟ್

                   ಮೃತಪಟ್ಟ ಮೇಘಾ ರಂಜಿತ್ ಪೈ


ಮಂಗಳೂರು: ನಗರದ ಕೊಟ್ಟಾರ ಚೌಕಿ ಸಮೀಪ ಅತೀ ವೇಗವಾಗಿ ಚಲಾಯಿಸಿಕೊಂಡು ಬಂದ ಬಸ್ ಢಿಕ್ಕಿಯಾದ ಪರಿಣಾಮ ಮಹಿಳಾ ಟೆಕ್ಕಿಯೋರ್ವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಸ್ ಚಾಲಕನನ್ನು ಬಂಧಿಸಿದ್ದಾರೆ.

ಪದವಿನಂಗಡಿ ನಿವಾಸಿ ಬಸ್ ಚಾಲಕ ಶರಣ್ ಕುಮಾರ್(35) ಬಂಧಿತ ಆರೋಪಿ.

ಬೆಂಗಳೂರಿನಲ್ಲಿ ಟೆಕ್ಕಿಯಾಗಿರುವ ಮೇಘಾ ರಂಜಿತ್ ಪೈ(34) ಮಂಗಳೂರಿನಲ್ಲಿರುವ ತವರು ಮನೆಗೆ ಬಂದಿದ್ದರು. ಇವರು ನಗರದ ನಗರದ ಕೊಟ್ಟಾರ ಚೌಕಿ ಸಮೀಪದ ಕಲ್ಲುರ್ಟಿ ದೈವಸ್ಥಾನದ ಮುಂಭಾಗ ರಸ್ತೆ ದಾಟುತ್ತಿದ್ದ ಸಂದರ್ಭ ದ್ವಿಮುಖ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಬಂದ ಗೋಲ್ಡನ್ ಎಂಬ ಸಿಟಿ ಬಸ್ ಢಿಕ್ಕಿ ಹೊಡೆದಿದೆ. 

ಪರಿಣಾಮ ಮೇಘಾ ರಂಜಿತ್ ಪೈಯವರ ತಲೆಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ದುರ್ಘಟನೆಗೆ ಚಾಲಕ ಶ್ರವಣ್ ಕುಮಾರ್ ನಿರ್ಲಕ್ಷ್ಯ ಹಾಗೂ ಅಜಾಗರೂಕತೆಯೇ ಕಾರಣ ಎಂದು ಪಾಂಡೇಶ್ವರದ ಸಂಚಾರಿ ಪಶ್ಚಿಮ ಪೊಲೀಸ್ ಠಾಣೆಗೆ ದೂರು ದಾಖಲಾಗಿತ್ತು.

ಈ ಹಿನ್ನೆಲೆಯಲ್ಲಿ ಶರಣ್ ಕುಮಾರ್ ನನ್ನು ಪೊಲೀಸರು ಬಂಧಿಸಿ ಆತನ ವಿರುದ್ಧ ಐಪಿಸಿ ಸೆಕ್ಷನ್ 304ರಂತೆ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಡಿ.17ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
BREAKING NEWS
Loading latest news...
Join our WhatsApp Channel Powered By : Online Pudu