ಸುರತ್ಕಲ್: ದುಷ್ಕರ್ಮಿಗಳಿಂದ ಚೂರಿ ಇರಿತಕ್ಕೊಳಗಾದ ವ್ಯಕ್ತಿ ಗಂಭೀರ




ಸುರತ್ಕಲ್: ದುಷ್ಕರ್ಮಿಗಳಿಬ್ಬರು ದಿನಸಿ ಅಂಗಡಿ ಮಾಲಕನಿಗೆ ಚೂರಿಯಿಂದ ಇರಿದು ಇರಿದು ಪರಾರಿಯಾಗಿರುವ ಘಟನೆ ಸುರತ್ಕಲ್ ಬಳಿಯ ಕೃಷ್ಣಾಪುರ 4ನೇ ಬ್ಲಾಕ್ ನೈತಂಗಡಿ ಎಂಬಲ್ಲಿ ನಡೆದಿದೆ.

ಕೃಷ್ಣಾಪುರ ನಿವಾಸಿ ಜಲೀಲ್ ಇರಿತಕ್ಕೊಳಗಾದವರು.

ನೈತಂಗಡಿಯಲ್ಲಿ ಜಲೀಲ್ ಅವರು ದಿನಸಿ ಅಂಗಡಿ ಹೊಂದಿದ್ದರು. ಅವರು ಅಂಗಡಿಯಲ್ಲಿದ್ದ ವೇಳೆ ದುಷ್ಕರ್ಮಿಗಳಿಬ್ಬರು ದಾಳಿ ನಡೆಸಿ ಅವರ ಎದೆಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿದ್ದು, ಜಲೀಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ‌. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.