-->

ಮಂಗಳೂರು: ಬುರ್ಖಾ ಧರಿಸಿದ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ; ನಾಲ್ವರ ಅಮಾನತು ಮಾಡಿದ ಕಾಲೇಜು

ಮಂಗಳೂರು: ಬುರ್ಖಾ ಧರಿಸಿದ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ; ನಾಲ್ವರ ಅಮಾನತು ಮಾಡಿದ ಕಾಲೇಜು

ಮಂಗಳೂರು: ಬುರ್ಖಾ ಧರಿಸಿ ವೇದಿಕೆಯಲ್ಲಿ ನೃತ್ಯ ಮಾಡಿರುವ ನಾಲ್ವರು ವಿದ್ಯಾರ್ಥಿಗಳನ್ನು ವಾಮಂಜೂರಿನ ಖಾಸಗಿ ಕಾಲೇಜಿನ ಆಡಳಿತ ಮಂಡಳಿ ಅಮಾನತು ಮಾಡಿದೆ.





ವಾಮಂಜೂರಿನ ಖಾಸಗಿ ಕಾಲೇಜಿನಲ್ಲಿ ಬುಧವಾರ ಸಂಜೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ನಂತರ ನಾಲ್ವರು ಬುರ್ಖಾ ಧರಿಸಿರುವ ವಿದ್ಯಾರ್ಥಿಗಳು ವೇದಿಕೆಯಲ್ಲಿ ವೇದಿಕೆಯಲ್ಲಿ ಬಾಲಿವುಡ್ ಐಟಂ ಸಾಂಗ್ ಗೆ ನೃತ್ಯ ಮಾಡಿದ್ದರು. ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಮುಸ್ಲಿಂ ವಿದ್ಯಾರ್ಥಿಗಳ ಈ ನೃತ್ಯಕ್ಕೆ ಮುಸ್ಲಿಂ ಸಮುದಾಯದಿಂದ ಭಾರೀ ಆಕ್ಷೇಪ ವ್ಯಕ್ತವಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕಾಲೇಜು ಪ್ರಾಂಶುಪಾಲರು ಆಂತರಿಕ ವಿಚಾರಣೆಯ ಬಳಿಕ ನಾಲ್ವರು ವಿದ್ಯಾರ್ಥಿಗಳನ್ನು ಅಮಾನತು ಮಾಡಿದ್ದಾರೆ.

ಈ ವಿದ್ಯಾರ್ಥಿಗಳು ಕಾಲೇಜಿನ ಅಧಿಕೃತ ಕಾರ್ಯಕ್ರಮದ ಬಳಿಕ ನೃತ್ಯ ಮಾಡಿದ್ದಾರೆ‌. ಕಾಲೇಜು ತನ್ನ ಆವರಣದಲ್ಲಿ ಯಾವುದೇ ರೀತಿಯ ಆಕ್ಷೇಪಾರ್ಹ ಹಾಗೂ ಸಮುದಾಯಗಳ ನಡುವೆ ಸೌಹಾರ್ದತೆಗೆ ಧಕ್ಕೆ ತರುವ ಕಾರ್ಯವನ್ನು ಬೆಂಬಲಿಸುವುದಿಲ್ಲ ಎಂದು ಕಾಲೇಜು ಪ್ರಾಂಶುಪಾಲರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article