-->
ಮಂಗಳೂರು: ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಗಾಯಾಳು ಆಟೋ ಚಾಲಕನ ಆಸ್ಪತ್ರೆ ಚಿಕಿತ್ಸಾ ವೆಚ್ಚ ಭರಿಸುವ ಭರವಸೆ ನೀಡಿದ ಜಿಲ್ಲಾಧಿಕಾರಿ

ಮಂಗಳೂರು: ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಗಾಯಾಳು ಆಟೋ ಚಾಲಕನ ಆಸ್ಪತ್ರೆ ಚಿಕಿತ್ಸಾ ವೆಚ್ಚ ಭರಿಸುವ ಭರವಸೆ ನೀಡಿದ ಜಿಲ್ಲಾಧಿಕಾರಿ


ಮಂಗಳೂರು: ಇತ್ತೀಚೆಗೆ ನಗರದಲ್ಲಿ ನಡೆದ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಪುರುಷೋತ್ತಮ ಅವರು ಆಸ್ಪತ್ರೆಯಲ್ಲಿ ಚಿಕಿತ್ಸಾ ವೆಚ್ಚ ಭರಿಸಲಾಗದೆ ತೊಂದರೆಗೊಳಗಾಗಿದ್ದಾರೆ. ಅವರ ಚಿಕಿತ್ಸಾ ವೆಚ್ಚವನ್ನು ಭರಿಸದೆ ಜಿಲ್ಲಾಡಳಿತ, ರಾಜ್ಯ ಸರಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಮಾಧ್ಯಮಗಳಲ್ಲಿ ವರದಿ ಬಿತ್ತರವಾದ ಬೆನ್ನಲ್ಲೇ  ಎಚ್ಚೆತ್ತ ಅವರ ಆಸ್ಪತ್ರೆ ವೆಚ್ಚವನ್ನು ತಾವೇ ಭರಿಸಲಾಗುತ್ತೇವೆ ಎಂದು ಜಿಲ್ಲಾಡಳಿತ ಹೇಳಿದೆ.

ಆಸ್ಪತ್ರೆಗೆ ಪುರುಷೋತ್ತಮ ಅವರ ಆರೋಗ್ಯ ವಿಚಾರಿಸಲು ಆಗಮಿಸಿದ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಸರಕಾರದಿಂದ ಪರಿಹಾರ ಒದಗಿಸುವ, ಆಸ್ಪತ್ರೆ ಚಿಕಿತ್ಸಾ ವೆಚ್ಚ ಭರಿಸುವ ಭರವಸೆ ನೀಡಿದ್ದರು. ಆದರೆ ಈವರೆಗೆ ಅವರಿಗೆ ಯಾವುದೇ ಪರಿಹಾರ ದೊರಕಿರಲಿಲ್ಲ. ಜೊತೆಗೆ ಆಸ್ಪತ್ರೆಯ ಚಿಕಿತ್ಸಾ ವೆಚ್ಚವನ್ನು ಭರಿಸಿರಲಿಲ್ಲ. ವೈಯಕ್ತಿಕ ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ 50 ಸಾವಿರ ರೂ., ದ.ಕ.ಜಿಲ್ಲಾ ಉಸ್ತವಾರಿ ಸಚಿವ ಸುನಿಲ್ ಕುಮಾರ್ 25 ಸಾವಿರ ರೂ. ಪುರುಷೋತ್ತಮ ಅವರ ಕುಟುಂಬಕ್ಕೆ ನೀಡಿದ್ದು ಬಿಟ್ಟರೆ ಬೇರೆ ಯಾವ ಪರಿಹಾರ ಈವರೆಗೆ ಸರಕಾರದಿಂದ ದೊರಕಿಲ್ಲ. 

ಬ್ಲಾಸ್ಟ್ ಘಟನೆಯ ಬಳಿಕ ರಿಕ್ಷಾ ಚಾಲಕ ಪುರುಷೋತ್ತಮ ಅವರನ್ನು ಜಿಲ್ಲಾಡಳಿತ ಮತ್ತು ರಾಜ್ಯ ಸರಕಾರ ಪೂರ್ತಿ ಮರೆತಿತ್ತು. ಇನ್ನು ಮುಂದೆ ಜೀವನ ಪೂರ್ತಿ ದುಡಿಯಲಾಗದ ಅಸಹಾಯಕ ಸ್ಥಿತಿಯಲ್ಲಿರುವ ಪುರುಷೋತ್ತಮ ಅವರು ಚಿಕಿತ್ಸಾ ವೆಚ್ಚಕ್ಕೆ ಪರದಾಡುವಂತಾಗಿದೆ. ಇದೀಗ ಖಾಸಗಿ ಕಂಪೆನಿಯಲ್ಲಿ ಉದ್ಯೋಗದಲ್ಲಿರುವ ಪುತ್ರಿಯ ಇಎಸ್ಐಯಿಂದಲೇ ಪುರುಷೋತ್ತಮ್ ಚಿಕಿತ್ಸೆ ನಡೆಯುತ್ತಿದೆ ಎಂಬುದು ಭಾರೀ ಟೀಕೆಗೆ ಗುರಿಯಾಗಿತ್ತು. ಆದ್ದರಿಂದ ತಕ್ಷಣ ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಅವರು ಪುರುಷೋತ್ತಮ್ ಅವರು ಚಿಕಿತ್ಸೆ ಪಡೆಯುತ್ತಿರುವ ಫಾದರ್ ಮುಲ್ಲರ್ ಆಸ್ಪತ್ರೆಗೆ ಪತ್ರ ಬರೆದು ಚಿಕಿತ್ಸಾ ವೆಚ್ಚವನ್ನು ಜಿಲ್ಲಾಡಳಿತವೇ ಭರಿಸುವುದಾಗಿ ಹೇಳಿದ್ದಾರೆ‌. 

Ads on article

  

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article