-->

ಜ್ವರದಿಂದ ಬಳಲುತ್ತಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಜ್ವರದಿಂದ ಬಳಲುತ್ತಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಸಾವು


ಬೆಳ್ತಂಗಡಿ: ಜ್ವರದಿಂದ ಬಳಲುತ್ತಿದ್ದ ಯುವತಿ ಮಂಗಳೂರಿನ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಅರ್ಬಿ ಮನೆಯ ಸಿಂಗರವರ ಪುತ್ರಿ ಪವಿತ್ರ (22) ಮೃತಪಟ್ಟ ಯುವತಿ.

ಎರಡು ದಿನದ ಹಿಂದೆ ಜ್ವರಕ್ಕೆ ತುತ್ತಾದ ಪವಿತ್ರನನ್ನು ಗುರುವಾಯನಕೆರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಜ್ವರ ಇನ್ನಷ್ಟು ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಡಿ.12ರಂದು ನಿಧನರಾಗಿದ್ದಾರೆ.

Ads on article

Advertise in articles 1

advertising articles 2

Advertise under the article