-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಅಭಿಷೇಕ್ - ಅವಿವಾ ವಿವಾಹ ನಿಶ್ಚಿತಾರ್ಥ ಸಮಾರಂಭದ ಅಪರೂಪದ ದೃಶ್ಯಗಳು ಇಲ್ಲಿದೆ ನೋಡಿ...

ಅಭಿಷೇಕ್ - ಅವಿವಾ ವಿವಾಹ ನಿಶ್ಚಿತಾರ್ಥ ಸಮಾರಂಭದ ಅಪರೂಪದ ದೃಶ್ಯಗಳು ಇಲ್ಲಿದೆ ನೋಡಿ...


ಬೆಂಗಳೂರು: ನಟ ಅಭಿಷೇಕ್ ಅಂಬರೀಷ್ ಮತ್ತು ಮಾಡೆಲ್ ಅವಿವಾ ಬಿದ್ದಪ್ಪ ನಿಶ್ಚಿತಾರ್ಥ ನೆರವೇರಿತ್ತು. ಈ ನಿಶ್ಚಿತಾರ್ಥದ ವೀಡಿಯೋ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.

ಡಿ.11ರಂದು ಬೆಳಗ್ಗೆ 9.30ಕ್ಕೆ ಆರ್.ಟಿ.ನಗರದ ಫೋರ್ ಸೀಸನ್ಸ್ ಹೋಟೆಲ್‌ನಲ್ಲಿ ಅಭಿಷೇಕ್ ಅಂಬರೀಷ್ ಮತ್ತು ಅವಿವಾ ಬಿದ್ದಪ್ಪ ವಿವಾಹ ನಿಶ್ಚಿತಾರ್ಥ ಎರಡೂ ಕುಟುಂಬದ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆಯಿತು. ಈ  ಕಾರ್ಯಕ್ರಮದಲ್ಲಿ ನಟ ದರ್ಶನ್, ನಟ ಯಶ್, ಅವರ ಪತ್ನಿ ನಟಿ ರಾಧಿಕಾ ಪಂಡಿತ್, ಸಚಿವ ಅಶ್ವಥ್ ನಾರಾಯಣ್ ಸೇರಿದಂತೆ ಚಿತ್ರರಂಗ ಹಾಗೂ ರಾಜಕೀಯ ಗಣ್ಯರು ಹಾಜರಿದ್ದು, ನವಜೋಡಿಗೆ ಶುಭ ಹಾರೈಸಿದ್ದರು.

ಈ ನಿಶ್ಚಿತಾರ್ಥ ಸಮಾರಂಭದ ವೀಡಿಯೋವನ್ನು ವೆಡ್ಡಿಂಗ್ ಜರ್ನಲ್ ಆಫ್ ಇಂಡಿಯಾ ಸಂಸ್ಥೆ ಸೊಗಸಾಗಿ ಸೆರೆಹಿಡಿದಿದೆ. ಈ ಕಂಪೆನಿಯ ಸಿಇಒ ಹಾಗೂ ಫೋಟೋ ಜರ್ನಲಿಸ್ಟ್ ಜಯರಾಮನ್ ಪಿಳ್ಳೆ ತಮ್ಮ ಯೂಟ್ಯೂಬ್‌ನಲ್ಲಿ ಈ ನಿಶ್ಚಿತಾರ್ಥದ ವೀಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ. ವೀಡಿಯೋದಲ್ಲಿ ಅಭಿಷೇಕ್ ಅಂಬರೀಷ್ ಮತ್ತು ಮಾಡೆಲ್ ಅವಿವಾ ಬಿದ್ದಪ್ಪ ಅವರ ಸಂಭ್ರಮದ ಅಪರೂಪದ ದೃಶ್ಯಗಳನ್ನು ಅಪ್ಲೋಡ್ ಮಾಡಲಾಗಿದೆ.

ಅಭಿಷೇಕ್ ಅಂಬರೀಷ್ ರನ್ನು ವಿವಾಹವಾಗಲಿರುವ ಅವಿವಾ ಬಿದ್ದಪ್ಪ, ಫ್ಯಾಷನ್ ಲೋಕದ ಖ್ಯಾತ ನಾಮ ಪ್ರಸಾದ್ ಬಿದ್ದಪ್ಪರವರ ಪುತ್ರಿ. ಅವಿವಾ ಹಾಗೂ ಅಭಿಷೇಕ್ ಕಳೆದ ನಾಲ್ಕು ವರ್ಷಗಳಿಂದ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದಾರೆಂದು ಹೇಳಲಾಗುತ್ತಿದೆ. ಇಬ್ಬರು ಪ್ರೀತಿಗೆ ಎರಡೂ ಕುಟುಂಬದಲ್ಲಿ ಗ್ರೀನ್ ಸಿಗ್ನಲ್ ಸಿಕ್ಕ ಬಳಿಕ ಇದೀಗ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇನ್ನು ಕೆಲವೇ ತಿಂಗಳಲ್ಲಿ ಇಬ್ಬರ ಮದುವೆ ನಡೆಯಲಿದೆ.

ನಿಶ್ಚಿತಾರ್ಥ ಆಗುವವರೆಗೂ ಅಭಿಷೇಕ್ ಅಂಬರೀಷ್ ತಾವು ಪ್ರೀತಿಸಿವ ಹುಡುಗಿ ಯಾರೆಂಬುದನ್ನು ಯಾರಿಗೂ ತಿಳಿಯದಂತೆ ರಹಸ್ಯ ಕಾಪಾಡುವ ಪ್ರಯತ್ನ ಮಾಡಿದ್ದರು. ಆದರೆ, ರಹಸ್ಯ ಹೆಚ್ಚು ದಿನ ಉಳಿಯಲಿಲ್ಲ. ಬಹಳ ಹಿಂದೆಯೇ ಅವಿವಾ ಬಿದ್ದಪ್ಪ ಹೆಸರು ಮಾಧ್ಯಮಗಳಲ್ಲಿ ಹರಿದಾಡಿತು. ಸದ್ಯ ಅಭಿಷೇಕ್ ಕಾಳಿ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. 

Ads on article

Advertise in articles 1

advertising articles 2

Advertise under the article