ಬಂಟ್ವಾಳ: ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಸ್ಲೀಪರ್ ಕೋಚ್ ನಲ್ಲಿ ಬೆಂಗಳೂರಿನಲ್ಲಿ ಪ್ರಯಾಣ; ತಡೆದ ಹಿಂದೂ ಕಾರ್ಯಕರ್ತರು


ಮಂಗಳೂರು: ಹಿಂದೂ ಯುವತಿ ಅನ್ಯಕೋಮಿನ ಯುವಕನೊಂದಿಗೆ ಸ್ಲೀಪರ್ ಕೋಚ್ ಬಸ್ಸಿನಲ್ಲಿ ಬೆಂಗಳೂರಿಗೆ ಪ್ರಯಾಣಿಸುತ್ತಿರುವುದರ ಮಾಹಿತಿ ಪಡೆದ, ಹಿಂದೂ ಕಾರ್ಯಕರ್ತರು ಬಸ್ಸನ್ನು ತಡೆದು ನಿಲ್ಲಿಸಿರುವ ಪ್ರಸಂಗ ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ

ಮುಸ್ಲಿಂ ಯುವಕ ಭಟ್ಕಳ ಮೂಲದವನಾಗಿದ್ದು, ಬೆಂಗಳೂರಿನಲ್ಲಿ ವಕೀಲ ವೃತ್ತಿ ಮಾಡುತ್ತಿದ್ದ. ಯುವಕ - ಯುವತಿ ಜೊತೆಯಾಗಿ ಶಿಕ್ಷಣ ಪೂರೈಸಿದ್ದ ಕಾರಣ ಪರಿಚಿತರಾಗಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಇಬ್ಬರೂ ಜೊತೆಯಾಗಿ ಮಂಗಳೂರಿನಿಂದ ಬೆಂಗಳೂರಿಗೆ ಜೊತೆಯಾಗಿ ತೆರಳುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಹಿಂದೂ ಸಂಘಟನೆಯ ಕಾರ್ಯಕರ್ತರು ಬಸ್ಸನ್ನು ತಡೆದು, ಯುವತಿಯನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಸ್ಥಳದಲ್ಲಿ ಹೈಡ್ರಾಮವೇ ನಡೆದಿದೆ. ಹಿಂದೂ ಕಾರ್ಯಕರ್ತರು ಹಾಗೂ ಯುವತಿಯ ಮಧ್ಯೆ ನಡೆದ ಮಾತಿನ ಚಕಮಕಿಯ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.



ಮಾಹಿತಿ ಪಡೆದ ಸ್ಥಳಕ್ಕಾಗಮಿಸಿದ ಪೊಲೀಸರು ಹಿಂದೂ ಕಾರ್ಯಕರ್ತರು ಹಾಗೂ ಯುವಕ, ಯುವತಿಯನ್ನು ಠಾಣೆಗೆ ಕರೆದೊಯ್ದು, ಪೋಷಕರಿಗೆ ಮಾಹಿತಿ ನೀಡಿದ್ದಾರೆ. ನಂತರ ಮನೆಯವರೊಂದಿಗೆ ಯುವತಿಯನ್ನು ಕಳುಹಿಸಲಾಗಿದೆ.


BREAKING NEWS
Loading latest news...
Join our WhatsApp Channel Powered By : Online Pudu