-->

ಓರ್ವನನ್ನೇ ವಿವಾಹವಾದ ಅವಳಿ ಸೋದರಿಯರು: ಕಾರಣವೇನು ಗೊತ್ತೇ?

ಓರ್ವನನ್ನೇ ವಿವಾಹವಾದ ಅವಳಿ ಸೋದರಿಯರು: ಕಾರಣವೇನು ಗೊತ್ತೇ?

ಮುಂಬೈ: ಐಟಿ ಇಂಜಿನಿಯರ್ ಅವಳಿ ಸೋದರಿಯರು ಓರ್ವನನ್ನೇ ವಿವಾಹವಾಗಿರುವ ಘಟನೆ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಮಲ್ಕಿರಸ್ ತಾಲೂಕಿನ ಅಕ್ಲುಜ್ ಎಂಬ ಗ್ರಾಮದಲ್ಲಿ ನಡೆದಿದೆ‌. ಶುಕ್ರವಾರ ಶಾಸ್ತ್ರೋಕ್ತವಾಗಿ ಇವರ ವಿವಾಹ ನೆರವೇರಿಸಲಾಗಿದೆ.

ಇವರ ವಿವಾಹಕ್ಕೆ ಯುವಕ ಹಾಗೂ ಅವಳಿ ಸಹೋದರಿಯರ ಕುಟುಂಬವೂ ಒಪ್ಪಿಕೊಂಡಿದೆ. ಮದುವೆಗೆ ಸಂಬಂಧಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಮದುವೆಯ ಕಾನೂನುಬದ್ಧತೆ ಮತ್ತು ನೈತಿಕತೆಯನ್ನು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.

ಅಂದಹಾಗೆ ಅವಳಿ ಸಹೋದರಿಯರಾದ ಪಿಂಕಿ ಮತ್ತು ರಿಂಕಿ ಮುಂಬೈನಲ್ಲಿ ಟೆಕ್ಕಿಗಳಾಗಿದ್ದಾರೆ. ಸಣ್ಣ ಇರುವಾಗಲಿಂದಲೂ ಇಬ್ಬರೂ ಜೊತೆಯಾಗಿ ವಾಸಿಸುತ್ತಿದ್ದ ಕಾರಣ, ಒಬ್ಬರನ್ನೊಬ್ಬರು ಬಿಟ್ಟು ಇನ್ನೊಬ್ಬರು ದೂರ ಇರಲಾಗದೇ ಇಬ್ಬರು ಸಹೋದರಿಯರು ಅತುಲ್ ಎಂಬ ವರನನ್ನು ಮದುವೆಯಾಗಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ಅತುಲ್ ಮೊದಲಿನಿಂದಲೂ ಅವಳಿ ಸಹೋದರಿಯರ ಕುಟುಂಬಕ್ಕೆ ಪರಿಚಿತನಾಗಿದ್ದ. ಕೆಲ ದಿನಗಳ ಹಿಂದೆ  ಸಹೋದರಿಯರು ತಂದೆ ಮೃತಪಟ್ಟಿದ್ದರು. ಆ ಬಳಿಕ ಯಾವಾಗ ಅವರ ತಾಯಿಗೆ ಅನಾರೋಗ್ಯ ಕಾಡಲು ಆರಂಭಿಸಿತೋ ಆಗ ಅತುಲ್ ಕಾರಿನಲ್ಲಿ ತಾಯಿಯನ್ನು ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ಮಾಡಿಸಿಕೊಂಡು ಬರುತ್ತಿದ್ದರು. ಈ ವೇಳೆ ಅತುಲ್ ಅವಳಿ ಸಹೋದರಿಯರ ಜೊತೆ ತುಂಬಾ ಸಲುಗೆ ಬೆಳೆಸಿಕೊಂಡಿದ್ದ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.

Ads on article

Advertise in articles 1

advertising articles 2

Advertise under the article