ಬಂಟ್ವಾಳ: ಇನ್ ಸ್ಟಾಗ್ರಾಂನಲ್ಲಿ ಪರಿಚಯವಾದ ಬಾಲಕಿಗೆ ಬಾಲಕನಿಂದ ಲೈಂಗಿಕ ಕಿರುಕುಳ; ಪೊಕ್ಸೊ ಪ್ರಕರಣ ದಾಖಲು



ಬಂಟ್ವಾಳ: ಇನ್ ಸ್ಟಾಗ್ರಾಂ ಮೂಲಕ ಪರಿಚಯವಾದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಎಸಗಿರುವ ಆರೋಪದ ಮೇಲೆ ಬಾಲಕನೋರ್ವನ ಮೇಲೆ ಪೊಕ್ಸೊ ಪ್ರಕರಣ ದಾಖಲಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಎಸ್ಎಸ್ಎಲ್ ಸಿ ವ್ಯಾಸಂಗ ಮಾಡುತ್ತಿರುವ ಬಾಲಕಿಗೆ ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಇನ್‌ಸ್ಟಾ ಗ್ರಾಂ ಮೂಲಕ ಪರಿಚಯವಾಗಿದ್ದ. ಆ ಬಳಿಕ ಆತ ಈ ಬಾಲಕಿಯ ಮನೆಗೆ ಆಗಾಗ ಬಂದು ಮಾತನಾಡಿ ಹೋಗುತ್ತಿದ್ದ. ಅದೇ ರೀತಿ ಅತ ಡಿ. 2ರಂದು ರಾತ್ರಿ 8.30ರ ಸುಮಾರಿಗೆ ಆಕೆಯ ಮನೆಗೆ ಬಂದಿದ್ದಾನೆ. ಬಳಿಕ ಸಂತ್ರಸ್ತ ಬಾಲಕಿಯನ್ನು ತನ್ನ ಸ್ಕೂಟರ್‌ನಲ್ಲಿ ಕರೆದೊಯ್ದು ಲೈಂಗಿಕ ಸಂಪರ್ಕ ಬೆಳೆಸಿದ್ದಾನೆ ಎಂದು ದೂರಲಾಗಿದೆ.

ಇದೀಗ ಬಾಲಕಿ ನೀಡಿರುವ ದೂರಿನಂತೆ ಪೊಕ್ಸೊ ಪ್ರಕರಣ ದಾಖಲಾಗಿದೆ. ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ರಿಮಾಂಡ್‌ ಹೋಮ್‌ಗೆ ದಾಖಲಿಸಲಾಗಿದೆ.
BREAKING NEWS
Loading latest news...
Join our WhatsApp Channel Powered By : Online Pudu