ಕರ್ನಾಟಕ ಈ ಕಡೆಗಳಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆ - ಹವಾಮಾನ ಇಲಾಖೆ ಮುನ್ಸೂಚನೆ!

 ಕರ್ನಾಟಕ ಹಲವು ಭಾಗಗಳಲ್ಲಿ ಇನ್ನೂ ನಾಲ್ಕು ದಿನ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

 ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೂ ಮೋಡಕವಿದ ವಾತಾವರಣವಿದ್ದು, ಅದು ನಾಳೆಯೂ ಮುಂದುವರಿಯಲಿದೆ.

 ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಅಂದ್ರೆ ಡಿಸೆಂಬರ್ 29ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 ದಕ್ಷಿಣ ಒಳನಾಡಿನ ಹಲವು ಭಾಗಗಳಾದ ಬೆಂಗಳೂರು, ಮಂಡ್ಯ, ಮೈಸೂರು, ಕೋಲಾರ, ರಾಮನಗರದಲ್ಲಿ ಮಳೆಯ ಸಾಧ್ಯತೆ ಹೆಚ್ಚಿದೆ ಎಂದು ಸೂಚಿಸಿದೆ.