ಭೀಕರ ರಸ್ತೆ ಅಪಘಾತದಲ್ಲಿ ಕ್ರಿಕೆಟರ್ ರಿಷಭ್ ಪಂತ್ ಗಂಭೀರ ಗಾಯ


ಹೊಸದಿಲ್ಲಿ: ಭೀಕರ ರಸ್ತೆ ಅಪಘಾತದಲ್ಲಿ ಭಾರತದ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಿಷಭ್ ಪಂತ್ ಶುಕ್ರವಾರ ಬೆಳಗ್ಗೆ ಉತ್ತರಾಖಂಡದಿಂದ ದೆಹಲಿಗೆ ತೆರಳುತ್ತಿದ್ದ ವೇಳೆ ಅವರ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಕಾರು ಅಪಘಾತಕ್ಕೀಡಾಗಿತ್ತು. ಗಂಭೀರವಾಗಿ ಗಾಯಗೊಂಡ ರಿಷಭ್ ಅವರನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಅವರಿಗೆ ಚಿಕಿತ್ಸೆ ನೀಡಿ ಪ್ಲಾಸ್ಟಿಕ್ ಸರ್ಜರಿ ಮಾಡಲಾಗುವುದು ಎಂದು ದೈನಿಕ್ ಜಾಗರಣ್ ವರದಿ ಮಾಡಿದೆ.

ರಿಷಬ್ ಅವರ ಕಾರು ರೇಲಿಂಗ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಬಹಳ ಪ್ರಯಾಸಪಟ್ಟು ಬೆಂಕಿಯನ್ನು ಹತೋಟಿಗೆ ತರಲಾಯಿತು. ಅದೇ ವೇಳೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಿಷಬ್ ಪಂತ್ ಅವರನ್ನು ದೆಹಲಿ ರಸ್ತೆಯಲ್ಲಿರುವ ಸಕ್ಷಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.


ವೈದ್ಯರ ಪ್ರಕಾರ, ರಿಷಬ್ ಪಂತ್ ಹಣೆ ಹಾಗಯ ಕಾಲಿಗೆ ಗಾಯಗಳಾಗಿವೆ. ಸದ್ಯ ರಿಷಬ್ ಪಂತ್ ಅವರ ಸ್ಥಿತಿ ಸ್ಥಿರವಾಗಿದ್ದು, ಅವರನ್ನು ರೂರ್ಕಿಯಿಂದ ದೆಹಲಿಗೆ ಕಳುಹಿಸಲಾಗುತ್ತಿದೆ ಎಂದು ಸಕ್ಷಮ್ ಆಸ್ಪತ್ರೆಯ ಅಧ್ಯಕ್ಷ ಡಾ.ಸುಶೀಲ್ ನಗರ್ ತಿಳಿಸಿದ್ದಾರೆ.

BREAKING NEWS
Loading latest news...
Join our WhatsApp Channel Powered By : Online Pudu