ಮಾನಸಿಕ ಖಿನ್ನತೆಗೊಳಗಾಗಿ ಟೆಕ್ಕಿ ಆತ್ಮಹತ್ಯೆ


ಬೆಂಗಳೂರು: ಮಾನಸಿಕ ಖಿನ್ನತೆಗೊಳಗಾಗಿದ್ದ 26 ವರ್ಷದ ಟೆಕ್ಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸ್ವಾತಿ (26) ಆತ್ಮಹತ್ಯೆಗೆ ಶರಣಾದ ಟೆಕ್ಕಿ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಇವರು ಪತಿ ದಾಮೋದರ್ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಸ್ವಾತಿ, ಎರಡು ವರ್ಷಗಳ ಹಿಂದೆ ದಾಮೋದರ್ ಎಂಬವರನ್ನು ವಿವಾಹವಾಗಿದ್ದರು. ನಿನ್ನೆ ತಡರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬಸವೇಶ್ವರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING NEWS
Loading latest news...
Join our WhatsApp Channel Powered By : Online Pudu