ಸುಳ್ಯ: ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ


ಸುಳ್ಯ: ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಸುಳ್ಯದ ಕುರುಂಜಿಭಾಗ್ ಬಿಸಿಎಂ ಹಾಸ್ಟೆಲ್ ನಲ್ಲಿ ನಡೆದಿದೆ.

ಮೂಲತಃ ಬೆಂಗಳೂರಿನ, ಸುಳ್ಯ ಶಾರದಾ ಹೆಣ್ಮಕ್ಕಳ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸೋನಿಯಾ (18) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಸೋನಿಯಾ ಇಂದು ಕಾಲೇಜಿಗೆ ಹೋಗದೇ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದಳು. ಮಧ್ಯಾಹ್ನ ಆಕೆಯ ರೂಂಮೇಟ್ ವಿದ್ಯಾರ್ಥಿನಿ ಊಟದ ತಟ್ಟೆ ತರಲೆಂದು ಹಾಸ್ಟೆಲ್ ಕೊಠಡಿಗೆ ಹೋದಾಗ ಬಾಗಿಲು ಹಾಕಿತ್ತು. ಬಾಗಿಲು ತಟ್ಟಿದ್ದರೂ ಬಾಗಿಲು ತೆರೆದಿರಲಿಲ್ಲ. ಆಕೆ ಮಲಗಿರಬಹುದೆಂದು ಭಾವಿಸಿ ಗೆಳತಿಯ ತಟ್ಟೆಯಲ್ಲಿ ಊಟ ಮುಗಿಸಿ ಮತ್ತೆ ರೂಮಿಗೆ ಬಂದು ಬಾಗಿಲು ಬಡಿದಿದ್ದಾಳೆ. ಆಗಲೂ ಬಾಗಿ ತೆರೆಯದಿದ್ದಾಗ ಸಂಶಯಗೊಂಡು ವಾರ್ಡನ್ ಗೆ ಮಾಹಿತಿ ನೀಡಿದ್ದಾಳೆ. ಹಾಸ್ಟೆಲ್ ಸಿಬ್ಬಂದಿ ಬಾಗಿಲು ಒಡೆದು ನೋಡಿದಾಗ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಪೊಲೀಸ್ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ, ಎಸ್ಐ ದಿಲೀಪ್ ಕುಮಾರ್ ಹಾಗೂ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ‌. ಮೃತದೇಹವನ್ನು ಮಹಜರು ಮಾಡಲು ಆಸ್ಪತ್ರೆಗೆ ರವಾನಿಸಲಾಗಿದೆ‌.
BREAKING NEWS
Loading latest news...
Join our WhatsApp Channel Powered By : Online Pudu