ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿಗೆ 5ವರ್ಷ ಜೈಲು ಶಿಕ್ಷೆ


ಮಂಗಳೂರು: ಅಪ್ರಾಪ್ತಗೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಲ್ಲಿ ವ್ಯಕ್ತಿಯೋರ್ವನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೊಕ್ಸೊ) ಹಾಗೂ ಎಫ್ ಟಿ ಎಸ್ ಸಿ 1 ನ್ಯಾಯಾಲಯ 5 ವರ್ಷ ಶಿಕ್ಷೆ ವಿಧಿಸಿ ಆದೇಶಿಸಿದೆ.

ನಗರದ ಬಿಜೈ ಕಾಪಿಕಾಡು ನಿವಾಸಿ ಶೇಖರ ಅಲಿಯಾಸ್ ಜೆ.ಡಿ.ಚಂದ್ರಶೇಖರ್ ಶಿಕ್ಷೆಗೊಳಗಾದ ಆರೋಪಿ. 

ಆರೋಪಿ ಶೇಖರ 2022ರ ಜೂ.21ರಂದು ಬೆಳಗ್ಗೆ ನಗರದ ಹ್ಯಾಟ್ ಹಿಲ್ ಜಡ್ಡಸ್ ಕ್ವಾಟ್ರರ್ಸ್ ಪಾರ್ಕಿಂಗ್ ಸ್ಥಳದಲ್ಲಿ ಪೈಂಟಿಂಗ್ ಮಾಡುತ್ತಿದ್ದ. ಈ ವೇಳೆ ಸಂತ್ರಸ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ದೂರು ನೀಡಲಾಗಿತ್ತು. ಈ ಬಗ್ಗೆ ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ ಎಸ್ಐ ಶ್ರೀಕಲಾ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣವನ್ನು ಕೈಗೆತ್ತಿಕೊಂಡ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೊಕ್ಸೊ) ಹಾಗೂ ಎಫ್ ಟಿ ಎಸ್ ಸಿ 1 ನ್ಯಾಯಾಲಯ ವಾದ - ವಿವಾದವನ್ನು ಆಲಿಸಿ ಆರೋಪಿ ತಪ್ಪಿತಸ್ಥನೆಂದು ತೀರ್ಪು ನೀಡಿದೆ. ಪೊಕ್ಸೊ ಕಾಯ್ದೆಯ ಕಲಂ8 ರಂತೆ 5 ವರ್ಷ ಸಾದಾ ಸಜೆ ಮತ್ತು ಒಂದು ಸಾವಿರ ರೂ. ದಂಡ ವಿಧಿಸಿ   ತೀರ್ಪು ನೀಡಿದ್ದಾರೆ. ಸಂತ್ರಸ್ತೆಗೆ ಒಂದು ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಧೀಶರು ಅದೇಶಿಸಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ಸರಕಾರಿ ಅಭಿಯೋಜಕಿ ಸಹನಾದೇವಿ ವಾದಿಸಿದ್ದರು.
BREAKING NEWS
Loading latest news...
Join our WhatsApp Channel Powered By : Online Pudu