9ರ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ವೀಡಿಯೋ ಚಿತ್ರೀಕರಿಸಿದ ಅಪ್ರಾಪ್ತರು


ಮಥುರಾ: ಒಂಬತ್ತರ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಇಬ್ಬರು ಅಪ್ರಾಪ್ತರು ಕೃತ್ಯದ ವೀಡಿಯೊ ಚಿತ್ರೀಕರಿಸಿ ಬೆದರಿಸಿರುವ ಘಟನೆ ನಡೆದಿದೆ. ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊ ಹಾಕುವುದಾಗಿ ಬ್ಲ್ಯಾಕ್‌ಮೇಲ್ ಮಾಡಿದ್ದಾರೆಂದು ದೂರಲಾಗಿದೆ‌.

ಸಂತ್ರಸ್ತೆಯ ಪೋಷಕರು ನೀಡಿದ ದೂರಿನನ್ವಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ ಎಂದು ಹೈವೇ ಪೊಲೀಸ್ ಠಾಣೆಯ ಅಧಿಕಾರಿ ಚೋಟೇಲಾಲ್ ಹೇಳಿದ್ದಾರೆ.

ಶನಿವಾರ ಸಂಜೆ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಈ ಘಟನೆ ನಡೆದಿದೆ. ನೆರೆಮನೆಯ ಇಬ್ಬರು ಹುಡುಗರು ಮನೆಗೆ ಬಂದು ಲೈಂಗಿಕ ಕಿರುಕುಳ ನೀಡಿದ್ದಾರೆ. ಬಾಲಕಿ ಪ್ರತಿರೋಧ ಒಡ್ಡಿದ ವೇಳೆ ಅವರು ಅತ್ಯಾಚಾರ ಎಸಗಿದ್ದಾರೆಂದು ಎಂದು ದೂರಿನಲ್ಲಿ ವಿವರಿಸಲಾಗಿದೆ.