-->
1000938341
ಸುಬ್ರಹ್ಮಣ್ಯ: ಹಿಂದೂ ವಿದ್ಯಾರ್ಥಿನಿಯೊಂದಿಗೆ ತಿರುಗಾಡುತ್ತಿದ್ದ ಮುಸ್ಲಿಂ ಯುವಕನಿಗೆ ಹಿಗ್ಗಾ-ಮುಗ್ಗಾ ಥಳಿಸಿದ ತಂಡ

ಸುಬ್ರಹ್ಮಣ್ಯ: ಹಿಂದೂ ವಿದ್ಯಾರ್ಥಿನಿಯೊಂದಿಗೆ ತಿರುಗಾಡುತ್ತಿದ್ದ ಮುಸ್ಲಿಂ ಯುವಕನಿಗೆ ಹಿಗ್ಗಾ-ಮುಗ್ಗಾ ಥಳಿಸಿದ ತಂಡ
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಇತ್ತೀಚೆಗೆ ಅಲ್ಲಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಸದ್ದು ಮಾಡುತ್ತಿದೆ‌. ಇದೀಗ ಮತ್ತೊಂದು ಅಂತಹದ್ದೇ ಪ್ರಕರಣವೊಂದು ಕುಕ್ಕೆ ಸುಬ್ರಮಣ್ಯದಲ್ಲಿ ನಡೆದಿದೆ.

ಕಲ್ಲುಗುಂಡಿ ನಿವಾಸಿ ಅಫೀದ್(20) ಹಲ್ಲೆಗೊಳಗಾದ ಯುವಕ. 

ಹೌದು ಅಪ್ರಾಪ್ತ ಹಿಂದೂ ವಿದ್ಯಾರ್ಥಿನಿಯೊಂದಿಗೆ ತಿರುಗುತ್ತಿದ್ದ ಮುಸ್ಲಿಂ ಯುವಕನ ಮೇಲೆ ತಂಡವೊಂದು ಮೈಯಿಡೀ ಬಾಸುಂಡೆ ಬರುವಂತೆ ಥಳಿಸಿದೆ‌. ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಕಂಡು ಬಂದ ಹಿಂದೂ-ಮುಸ್ಲಿಂ ಜೋಡಿ ಮತ್ತೆ ಕುಮಾರಧಾರಾ ಬಳಿ ಕಂಡು ಬಂದಿದೆ. ಇದನ್ನು ಗಮನಿಸಿದ ತಂಡವೊಂದು ಯುವಕನನ್ನು ಹಿಗ್ಗಾಮುಗ್ಗಾ ಥಳಿಸಿದೆ.

ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಾಗಿದ್ದು, ಹಲ್ಲೆಗೈದವರ ವಿರುದ್ಧ ಪೊಲೀಸರಿಗೆ ದೂರು ದಾಖಲಾಗಿದೆ. ಯುವಕ ನೀಡಿರುವ ದೂರಿನಂತೆ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಹಿಂದೂ ವಿದ್ಯಾರ್ಥಿನಿ ಅಪ್ರಾಪ್ತ ವಯಸ್ಕಳಾಗಿದ್ದು, ಆಕೆಯ ತಂದೆಯೂ ಅಫ್ರೀದ್ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ. ಆದ್ದರಿಂದ ಪೊಲೀಸರು ಯುವಕನ ವಿರುದ್ಧ ಪೊಕ್ಸೊ ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ.

Ads on article

Advertise in articles 1

advertising articles 2

Advertise under the article