-->
ಬಹುನಿರೀಕ್ಷಿತ "ಶಕಲಕ ಬೂಮ್ ಬೂಮ್" ಸಿನಿಮಾ ಬಿಡುಗಡೆ

ಬಹುನಿರೀಕ್ಷಿತ "ಶಕಲಕ ಬೂಮ್ ಬೂಮ್" ಸಿನಿಮಾ ಬಿಡುಗಡೆ

ಮಂಗಳೂರು: "ಯುಎನ್ ಸಿನೆಮಾಸ್ ಬ್ಯಾನರ್ ನಡಿ ನಿರ್ಮಾಣಗೊಂಡಿರುವ ಶಕಲಕ ಬೂಮ್ ಬೂಮ್ ತುಳು ಚಿತ್ರ  ಇಂದು ತುಳುನಾಡಿನಾದ್ಯಂತ ಬಿಡುಗಡೆಯಾಗಿದೆ.


ಮಂಗಳೂರಿನ ಬಿಗ್ ಸಿನಿಮಾದಲ್ಲಿ ನಡೆದ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಚಿತ್ರ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್  ಸಿನಿಮಾ ಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ ಉಪಸ್ಥಿತರಿದ್ದರು.

"ಕಾಮಿಡಿ, ಹಾರರ್ ವಿಭಿನ್ನ ಕಥಾಹಂದರದ ಚಲನಚಿತ್ರವನ್ನು ಶ್ರೀಶ ನಾಯಕ್  ಎಳ್ಳಾರೆ ನಿರ್ದೇಶನ
ಮಾಡಿದ್ದಾರೆ. ಚಿತ್ರಕ್ಕೆ ನಿತ್ಯಾನಂದ ನಾಯಕ್ ನರಸಿಂಗೆ, ಉಮೇಶ್ ಪ್ರಭು ಮಾಣಿಬೆಟ್ಟು ನಿರ್ಮಾಪಕರಾಗಿದ್ದಾರೆ. ಡಾಲ್ವಿನ್ ಕೊಳಲಗಿರಿ ಚಿತ್ರದ ಸಂಗೀತ ನಿರ್ದೇಶಕರಾಗಿದ್ದರೆ.
ತುಳುನಾಡಿನ ಖ್ಯಾತ ಛಾಯಾಗ್ರಾಹಕರಾದ ಪ್ರಜ್ವಲ್ ಸುವರ್ಣ ಹಾಗೂ ಅರುಣ್ ರೈ ಪುತ್ತೂರು ಕ್ಯಾಮರಾ ಕೈಚಳಕವಿದೆ
ಚಿತ್ರದ ಪ್ರಮುಖ ಭೂಮಿಕೆಯಲ್ಲಿ ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್, ಉಮೇಶ್ ಮಿಜಾರ್, ಪ್ರವೀಣ್ ಮರ್ಕಮೆ, ಮಿಮಿಕ್ರಿ ಶರಣ್, ಕಥಾನಾಯಕನಾಗಿ ಗೊಡ್ವಿನ್
ಸ್ಪಾರ್ಕಲ್ ಹಾಗೂ ಕಥಾನಾಯಕಿಯಾಗಿ ಲಕ್ಷಾ ಶೆಟ್ಟಿ, ರೂಪಶ್ರೀ ವರ್ಕಾಡಿ, ಮನೋಹರ್‌ ಶೆಟ್ಟಿ
ನಂದಳಿಕೆ, ವಸಂತ್ ಮುನಿಯಾಲ್, ಹರೀಶ್ ಗಾಳಿಪಟ, ಸುನಿಲ್ ಕಡ್ತಲ, ಯತೀಶ್ ಪೂಜಾರಿ,
ಯಶವಂತ್, ಪ್ರವೀಣ್ ಆಚಾರ್ಯ, ಕಾಮಿಡಿ ಕಿಲಾಡಿ ಖ್ಯಾತಿಯ ರಾಧೇಶ್, ಕಾಮಿಡಿ ಗ್ಯಾಂಗ್ ಖ್ಯಾತಿಯ ರಾಜೇಶ್ ದಾನಶಾಲೆ, ಲಂಚುಲಾಲ್, ರಾಜೇಶ್ವರಿ ಕುಲಾಲ್, ಧೀರಜ್, ಶಿವಾನಂದ, ಯಜ್ಞೆಶ್ ಶೆಟ್ಟಿ ಅಭಿನಯಿಸಿದ್ದಾರೆ. 
ತುಳು ಸಿನೆಮಾದಲ್ಲಿ ವೈವಿಧ್ಯತೆ ಇರಬೇಕು ಎಂಬ ನೆಲೆಯಲ್ಲಿ ಕಾಮಿಡಿ, ಹಾರರ್, ಥ್ರಿಲ್ಲರ್,
ಸಸ್ಪೆನ್ಸ್ ನ್ನು ಹೊಂದಿರುವ ಹೊಸತನದ ಚಿತ್ರ ಶಕಲಕ ಬೂಮ್ ಬೂಮ್ ಆಗಿದೆ.
ಜನರನ್ನು ಮೋಸ ಮಾಡುತ್ತ ಬದುಕುವವರು, ಸಂಪತ್ತಿನ ಆಸೆಯಿಂದ ಬಂದು ಪಾಳು
ಬಿದ್ದ ಮನೆಯಲ್ಲಿ ಬಂಧಿಯಾಗುತ್ತಾರೆ. ಆ ಮನೆಯ ರಹಸ್ಯ ಏನು? ಈ ಹಿಂದೆ ಆ ಮನೆಯಲ್ಲಿ
ಏನಾಗಿತ್ತು? ನ್ಯಾಯ ಗೆಲ್ಲುತ್ತದಾ? ಸತ್ಯಕ್ಕೆ ಜಯವಿದೆಯಾ? ಎನ್ನುವ ವಿಶಿಷ್ಟವಾದ ಕಥಾಹಂದರ
ಹೊಂದಿರುವ ವಿಭಿನ್ನವಾದ ಚಿತ್ರ ಇದಾಗಿದೆ.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article