-->

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಹಿಂದೂ ಸಂಘಟನೆಯ ಮುಖಂಡನ ಮೃತದೇಹ ಪತ್ತೆ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಹಿಂದೂ ಸಂಘಟನೆಯ ಮುಖಂಡನ ಮೃತದೇಹ ಪತ್ತೆ


ಬಂಟ್ವಾಳ: ಇಲ್ಲಿನ ಪಾಣೆಮಂಗಳೂರಿನ ಹಳೆ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಹಿಂದೂ ಸಂಘಟನೆಯ ಮುಖಂಡನೋರ್ವನ ಮೃತದೇಹ ಗುರುವಾರ ಬೆಳಗ್ಗೆ ಪತ್ತೆಯಾಗಿದೆ.

ಬಂಟ್ವಾಳ ತಾಲೂಕಿನ ಸಜಿಪ ನಿವಾಸಿ ರಾಜೇಶ್ ಪೂಜಾರಿ ಸ್ಥಾನಮನೆ(36) ಮೃತಪಟ್ಟ ಯುವಕ.

ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಇಂದು ಬೆಳಗ್ಗೆ ದ್ವಿಚಕ್ರ ವಾಹನವೊಂದು ಅನಾಥ ಸ್ಥಿತಿಯಲ್ಲಿ ಬಿದ್ದುಕೊಂಡು ಪತ್ತೆಯಾಗಿತ್ತು. ಈ ಬಗ್ಗೆ ಸಂಶಯಗೊಂಡ ಸಾರ್ವಜನಿಕರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಮುಳುಗು ತಜ್ಞರ ಸಹಕಾರದಿಂದ ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ರಾಜೇಶ್ ಪೂಜಾರಿಯ ಮೃತದೇಹ ಪತ್ತೆಯಾಗಿದೆ.

ರಾಜೇಶ್ ಪೂಜಾರಿ ಕಳೆದ ರಾತ್ರಿ ತಮ್ಮ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಸೇತುವೆಯಲ್ಲಿ ಅಪಘಾತಕ್ಕೀಡಾಗಿ ಅವರು ನದಿಗೆಸೆಯಲ್ಪಟ್ಟಿರಬಹುದೆಂದೆ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪೋಲಿಸರು ತನಿಖೆ ಆರಂಭಿಸಿದ್ದಾರೆ.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article