-->

ಮಂಗಳೂರು: ಪಚ್ಚನಾಡಿ ತ್ಯಾಜ್ಯರಾಶಿಗೆ ಬೆಂಕಿ; ನಂದಿಸಲು ಹರಸಾಹಸ

ಮಂಗಳೂರು: ಪಚ್ಚನಾಡಿ ತ್ಯಾಜ್ಯರಾಶಿಗೆ ಬೆಂಕಿ; ನಂದಿಸಲು ಹರಸಾಹಸಮಂಗಳೂರು: ನಗರದ ಪಚ್ಚನಾಡಿಯ ತ್ಯಾಜ್ಯರಾಶಿಯಲ್ಲಿ ದಿಢೀರ್‌ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದವರು ಹರಸಾಹಸ ಪಟ್ಟು ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ.ಪಚ್ಚನಾಡಿಯ ತ್ಯಾಜ್ಯ ರಾಶಿಯಲ್ಲಿ ಪದೇ ಪದೇ ಬೆಂಕಿ ಕಾಣಿಸುಕೊಳ್ಳುತ್ತಿರುತ್ತದೆ. ಶುಕ್ರವಾರ ಮಧ್ಯಾಹ್ನ ಮತ್ತೆ ಇಲ್ಲಿ ಅಗ್ನಿ ಅವಘಡ ಸಂಭವಿಸಿದೆ. ತಕ್ಷಣ ಶಾಸಕ ಡಾ. ಭರತ್ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ಶಮನ ಮಾಡಲು 10ಕ್ಕೂ ಅಧಿಕ ಅಗ್ನಿಶಾಮಕ ದಳವನ್ನು ತರಿಸಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ನೂರಕ್ಕೂ ಅಧಿಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ.

ಮೇಯರ್ ಜಯಾನಂದ ಅಂಚನ್, ಸ್ಥಳಿಯ ಕಾರ್ಪೊರೇಟರ್ ಸಂಗೀತ ನಾಯಕ್ ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಮತ್ತಿತರ ಅಧಿಕಾರಿಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.

Ads on article

Advertise in articles 1

advertising articles 2

Advertise under the article