-->
ನಿಮ್ಮ ಪಾದದಲ್ಲಿ ಈ ಸಮಸ್ಯೆಗಳು ಕಂಡು ಬಂದರೆ ನಿಮಗೆ ಮೂತ್ರಪಿಂಡದ ವೈಫಲ್ಯ ಇದೆ ಎಂದು ಅರಿತುಕೊಳ್ಳಿ..!!

ನಿಮ್ಮ ಪಾದದಲ್ಲಿ ಈ ಸಮಸ್ಯೆಗಳು ಕಂಡು ಬಂದರೆ ನಿಮಗೆ ಮೂತ್ರಪಿಂಡದ ವೈಫಲ್ಯ ಇದೆ ಎಂದು ಅರಿತುಕೊಳ್ಳಿ..!!


ಕಾಲುಗಳಲ್ಲಿ ಕಾಣಿಸಿಕೊಳ್ಳುವ ನೋವು : 
ಮೂತ್ರಪಿಂಡವು ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದಿದ್ದಾಗ ನಮ್ಮ ರಕ್ತದಲ್ಲಿ ವಿಷ ಮತ್ತು ಕೊಳಕು ಸಂಗ್ರಹಗೊಳ್ಳಲು ಪ್ರಾರಂಭವಾಗುತ್ತದೆ. ಇದರಿಂದಾಗಿ ದೇಹದ ಎಲ್ಲಾ ಭಾಗಗಳಿಗೂ ಸರಿಯಾಗಿ ರಕ್ತ ಪೂರೈಕೆ ಆಗುವುದಿಲ್ಲ.  ಇದು ಮೂತ್ರಪಿಂಡಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎನ್ನುವುದರ ಸ್ಪಷ್ಟ ಸಂಕೇತವಾಗಿದೆ. 


ಒಣ ಮತ್ತು ಒರಟು ಚರ್ಮ
ಮೂತ್ರಪಿಂಡಗಳು ದೇಹದಿಂದ ವಿಷವನ್ನು ಹೊರ ಹಾಕಲು ಸಾಧ್ಯವಾಗದೇ ಹೋದಾಗ, ದೇಹದಲ್ಲಿ ಕೆಂಪು ರಕ್ತ ಕಣಗಳ ವೃದ್ದಿಯಾಗುವುದಿಲ್ಲ. ಇದು ದುರ್ಬಲ ಮೂಳೆಗಳು ಮತ್ತು ಒರಟು ಚರ್ಮಕ್ಕೆ ಕಾರಣವಾಗುತ್ತದೆ. 

ಸ್ನಾಯು ಸೆಳೆತ
ಮೂತ್ರಪಿಂಡಗಳು ಸರಿಯಾಗಿ ಕಾರ್ಯನಿರ್ವಹಿಸಲು ಅಸಮರ್ಥವಾದಾಗ ದೇಹದಲ್ಲಿ ಎಲೆಕ್ಟ್ರೋಲೈಟ್ ಅಸಮತೋಲನದ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಇದರಿಂದಾಗಿ ಸ್ನಾಯು ಸೆಳೆತದ ಸಮಸ್ಯೆ ಉಂಟಾಗುತ್ತದೆ. 

ಪಾದಗಳಲ್ಲಿ ನೋವು
ದೇಹದಲ್ಲಿ ಟಾಕ್ಸಿನ್‌ಗಳು ಅಧಿಕವಾಗಿ ಸಂಗ್ರಹವಾದಾಗ, ಅದು ನೇರವಾಗಿ ಪಾದಗಳ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಪಾದಗಳು ಊದಿಕೊಳ್ಳುತ್ತವೆ. 

ಪಾದಗಳು ಊದಿಕೊಳ್ಳುವುದು  
ಮೂತ್ರಪಿಂಡಗಳು ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದಿದ್ದಾಗ ಸೋಡಿಯಂ ರಿಟೆನ್ಶನ್ ನಿಂದಾಗಿ ಪಾದಗಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಕಾಲ್ಬೆರಳುಗಳು ಊದಿಕೊಳ್ಳುತ್ತವೆ. 

Ads on article

  

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article