ಈ ಎಲ್ಲಾ ಕಾಯಿಲೆಗಳು ಇರುವವರು ಅರಿಶಿನ ಮಿಶ್ರಿತ ಹಾಲನ್ನು ಕುಡಿಯಲೇಬಾರದು..ಯಾಕೆ ಗೊತ್ತಾ?


ಕಿಡ್ನಿ ಕಾಯಿಲೆ ಇರುವವರು ಸೇವಿಸಬಾರದು
ಕಿಡ್ನಿ ಸಂಬಂಧಿತ ಕಾಯಿಲೆಗಳಿಂದ ಬಳುತ್ತಿರುವವರು ಅರಿಶಿಣ ಹಾಲನ್ನು ಕುಡಿಯುವುದನ್ನು ತಪ್ಪಿಸಬೇಕು. ಏಕೆಂದರೆ ಅರಿಶಿಣವು ಆಕ್ಸಲೇಟ್ ಅನ್ನು ಹೊಂದಿರುತ್ತದೆ, ಇದು ಮೂತ್ರಪಿಂಡಕ್ಕೆ ಸಂಬಂಧಿಸಿದ ಕಾಯಿಲೆಗಳನ್ನು ಪ್ರಚೋದಿಸುತ್ತದೆ.


ರಕ್ತದಲ್ಲಿ ಕಡಿಮೆ ಸಕ್ಕರೆಯ ಮಟ್ಟವನ್ನು ಹೊಂದಿರುವ ರೋಗಿಗಳು ಅರಿಶಿಣ ಹಾಲನ್ನು ಸೇವಿಸಬಾರದು. ಏಕೆಂದರೆ ಅರಿಶಿಣವು ಕರ್ಕ್ಯುಮಿನ್ ಅನ್ನು ಹೊಂದಿರುತ್ತದೆ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಮತ್ತಷ್ಟು ಕಡಿಮೆ ಮಾಡುತ್ತದೆ. 

ಕಳಪೆ ಜೀರ್ಣಕ್ರಿಯೆ ಹೊಂದಿರುವ ಜನರು ಸೇವಿಸಬಾರದು
ಹೊಟ್ಟೆಯಲ್ಲಿ ಗ್ಯಾಸ್, ಉಬ್ಬರ, ಎದೆಯುರಿ ಮುಂತಾದ ಜೀರ್ಣಕಾರಿ ಸಮಸ್ಯೆಗಳಿದ್ದರೆ ನೀವು ಅರಿಶಿಣ ಹಾಲನ್ನು ಸೇವಿಸುವುದನ್ನು ತಪ್ಪಿಸಬೇಕು. 

ರಕ್ತಹೀನತೆ ಹೊಂದಿರುವ ಜನರು ಸೇವಿಸಬಾರದು
ಅರಿಶಿಣ ಹಾಲನ್ನು ಸೇವಿಸುವುದರಿಂದ ದೇಹದಲ್ಲಿ ಕಬ್ಬಿಣದ ಹೀರಿಕೊಳ್ಳುವಿಕೆಗೆ ಅಡ್ಡಿಯುಂಟಾಗುತ್ತದೆ. ಕಬ್ಬಿಣ ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟ ಹೆಚ್ಚಳಕ್ಕೆ ಕಾರಣವಾಗಿದೆ.