-->

ಕಾಂಗ್ರೆಸ್ ಪಕ್ಷವನ್ನು ಆಡಳಿತಕ್ಕೆ ತರುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ “ಪ್ರಜಾಧ್ವನಿ ಯಾತ್ರೆ”- ಎಂ ಎಲ್ ಸಿ ಮಂಜುನಾಥ ಭಂಡಾರಿ

ಕಾಂಗ್ರೆಸ್ ಪಕ್ಷವನ್ನು ಆಡಳಿತಕ್ಕೆ ತರುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ “ಪ್ರಜಾಧ್ವನಿ ಯಾತ್ರೆ”- ಎಂ ಎಲ್ ಸಿ ಮಂಜುನಾಥ ಭಂಡಾರಿ

 



 

ಜನವರಿ 22ರಂದು ಅವಿಭಜಿತ . ಜಿಲ್ಲೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರ ಸಮಾಕ್ಷಮದಲ್ಲಿ ಪ್ರಜಾಧ್ವನಿ ಯಾತ್ರೆ ಬೃಹತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ನಡೆಯಲಿದೆ ಎಂದು ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ತಿಳಿಸಿದ್ದಾರೆ.

ರಾಜ್ಯ ಮತ್ತು ರಾಷ್ಟçಮಟ್ಟದಲ್ಲಿ ಆಡಳಿತ ನಿರ್ವಹಿಸುತ್ತಿರುವ ಬಿಜೆಪಿ ಸರಕಾರದ ಸಂಪೂರ್ಣ ವಿಫಲವಾಗಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲೂ ಜನರಿಗೆ ಆಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಜನರ ಧ್ವನಿಗೆ ಶಕ್ತಿ ತುಂಬ ಬೇಕಾಗಿದೆ.  ಎಲ್ಲ ಪ್ರಭುತ್ವಕ್ಕಿಂತಲೂ ಪ್ರಜಾ ಪ್ರಭುತ್ವ ಉತ್ತಮವಾದುದು.  ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಆಧಾರ ಸ್ತಂಭಗಳಾದ ನ್ಯಾಯಾಂಗ, ಕಾರ್ಯಾಂಗ, ಚುನಾವಣಾ ಆಯೋಗದಂತಹ ಪ್ರಾಧಿಕಾರಗಳು ಕೆಲಸ ಮಾಡದಂತೆ ಮಾಡಿದ್ದಾರೆ. ಸರಕಾರದ ಯಾವೊಂದು ಯೋಜನೆಗಳು ಕೂಡ ಬಿಡುಗಡೆಗೊಳ್ಳುತ್ತಿಲ್ಲ, ಅನೇಕ ಯೋಜನೆಗಳ ಬಗ್ಗೆ ಸುಳ್ಳು ಭರವಸೆ ನೀಡಿದೆ. ವಿದ್ಯಾರ್ಥಿಗಳಿಂದ ಹಿಡಿದು ವಯೋವೃದ್ಧರವರೆಗೆ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಇದನ್ನು ಮರೆಮಾಚಿ ರಾಜ್ಯ ಸರಕಾರ ಜನರ ಕಣ್ಣಿಗೆ ಮಣ್ಣೆರಚ್ಚುತ್ತಿದೆ ಎಂದು ಅವರು ಹೇಳಿದರು

 "ರಾಜ್ಯ ಸರಕಾರ ಕೃಷಿಕರನ್ನು ಬೀದಿಗೆ ತಂದು ನಿಲ್ಲಿಸಿದೆ. ಕೃಷಿಕರಿಗೆ ಪೂರಕವಾಗಿ ಯಾವುದೇ ಯೋಜನೆಗಳನ್ನು ಜಾರಿಗೆ ತರುತ್ತಿಲ್ಲ.  ಜನ ಸಾಮಾನ್ಯರ ಧ್ವನಿಯಾಗಿ ಸರಕಾರದ ವೈಫಲ್ಯವನ್ನು ಖಂಡಿಸಲು ಹಾಗೂ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜನಸ್ನೇಹಿ, ಜನಪರ, ಜನಹಿತಕ್ಕಾಗಿ ಕಾರ್ಯನಿರ್ವಹಿಸುವ ಕಾಂಗ್ರೆಸ್ ಪಕ್ಷವನ್ನು ಆಡಳಿತಕ್ಕೆ ತರುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷಪ್ರಜಾಧ್ವನಿ ಯಾತ್ರೆ ಯನ್ನು ಹಮ್ಮಿಕೊಂಡಿದೆ ಎಂದು ಶಾಸಕರಾದ ಮಂಜುನಾಥ ಭಂಡಾರಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ಕೂಡಲೇಗೃಹಜ್ಯೋತಿ ಹಾಗೂಗೃಹಲಕ್ಷಿö್ಮÃ ಎಂಬ ಎರಡು ಯೋಜನೆಗಳನ್ನು ಜಾರಿಗೊಳಿಸುವುದಾಗಿ ಮಹತ್ವದ ಘೋಷಣೆ ಹೊರಡಿಸಿರುವುದನ್ನು ಶಾಸಕರಾದ ಮಂಜುನಾಥ ಭಂಡಾರಿಯವರು ಸ್ವಾಗತಿಸಿದರು.

Ads on article

Advertise in articles 1

advertising articles 2

Advertise under the article