ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ; ಪಿಎ ಇಂಜಿನಿಯರಿಂಗ್ ಕಾಲೇಜಿಗೆ ಎನ್ಐಎ ದಾಳಿ ವಿದ್ಯಾರ್ಥಿ ವಶಕ್ಕೆ


ಉಳ್ಳಾಲ: ಮಂಗಳೂರಿನಲ್ಲಿ ಇತ್ತೀಚೆಗೆ ನಡೆದಿರುವ ಕುಕ್ಕರ್ ಬಾಂಬ್ ಸ್ಪೋಟ ಹಾಗೂ ಶಿವಮೊಗ್ಗ ಬಾಂಬ್ ಟ್ರಯಲ್ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಎನ್ಐಎ ಅಧಿಕಾರಿಗಳು ಇಂದು ಕೊಣಾಜೆಯ ಪಿಎ ಇಂಜಿನಿಯರಿಂಗ್ ಕಾಲೇಜಿಗೆ ದಿಢೀರ್ ದಾಳಿ ನಡೆಸಿ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಶಿವಮೊಗ್ಗ ಬಾಂಬ್ ಟ್ರಯಲ್ ಪ್ರಕರಣದಲ್ಲಿ ಬಂಧಿತನಾಗಿದ್ದ ಶಂಕಿತ ಭಯೋತ್ಪಾದಕ ಮಾಝ್ ಮುನೀರ್ ಪಿಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ ಪಡೆದಿದ್ದ. ಕಾಲೇಜಿನಲ್ಲಿ ಆತನ ದಾಖಲೆ ಇನ್ನಿತರ ಮಾಹಿತಿಗಳನ್ನು ಅಧಿಕಾರಿಗಳು ಸಂಗ್ರಹಿಸಿದ್ದಾರೆ. ಶಂಕಿತ ಭಯೋತ್ಪಾದಕರೊಂದಿಗೆ ಸಂಪರ್ಕದಲ್ಲಿದ್ದ ಆರೋಪದ ಮೇಲೆ ಉಡುಪಿ ಮೂಲದ ಕೊಣಾಜೆಯ ಪಿ.ಎ ಕಾಲೇಜು ಇಂಜಿನಿಯರಿಂಗ್ ವಿದ್ಯಾರ್ಥಿ ತಾಜುದ್ದೀನ್ ಶೇಖ್ ಎಂಬಾತನನ್ನು ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆಂದು ಮಾಹಿತಿ ಲಭ್ಯವಾಗಿದೆ.

ಕುಕ್ಕರ್ ಬಾಂಬ್ ಪ್ರಕರಣದಲ್ಲಿ ಬಂಧನದಲ್ಲಿರುವ ಶಂಕಿತ ಉಗ್ರ ಶಾರೀಕ್ ನನ್ನೂ ಬೆಂಗಳೂರಿನಲ್ಲಿ ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಇದೀಗ ಬೆಂಗಳೂರಿನಿಂದ 7 ಮಂದಿ ಎನ್ಐಎ ಅಧಿಕಾರಿಗಳ ತಂಡ ಮಂಗಳೂರಿಗೆ ಆಗಮಿಸಿ ಪಿ.ಎ.ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿ ಓರ್ವನನ್ನು ಬಂಧಿಸಿದ್ದಾರೆ. 

BREAKING NEWS
Loading latest news...
Join our WhatsApp Channel Powered By : Online Pudu