-->

ಕರ್ನಾಟಕದಲ್ಲಿ ನಿಷೇಧಿತ ಉಗ್ರ ಸಂಘಟನೆ ಸಿಮಿ ಆ್ಯಕ್ಟಿವ್

ಕರ್ನಾಟಕದಲ್ಲಿ ನಿಷೇಧಿತ ಉಗ್ರ ಸಂಘಟನೆ ಸಿಮಿ ಆ್ಯಕ್ಟಿವ್


ಬೆಂಗಳೂರು: ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ನಿಷೇಧಿತ ಸಿಮಿ ಸಂಘಟನೆ ಸಕ್ರಿಯವಾಗಿದೆ ಎಂದು ಕೇಂದ್ರ ಸರ್ಕಾರದಿಂದ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಕೆ ಮಾಡಿದೆ. ಸಿಮಿ ಸಂಘಟನೆಯ ಮೇಲಿನ ನಿಷೇಧವನ್ನು ತೆರವು ಸಂಬಂಧ ಸುಪ್ರೀಂಕೋರ್ಟ್‌ ಗೆ ಅರ್ಜಿ ಸಲ್ಲಿಕೆಯಾಗಿತ್ತು.

ಸಿಮಿ ಸಂಘಟನೆಯನ್ನು 2001 ರಲ್ಲಿ ಬ್ಯಾನ್ ಮಾಡಲಾಗಿತ್ತು. ಸಿಮಿ ಸಂಘಟನೆ ಈಗಲೂ ಕರ್ನಾಟಕ, ಬಿಹಾರ್ ಸೇರಿ ಹಲವು ರಾಜ್ಯಗಳಲ್ಲಿ ಸಕ್ರಿಯವಾಗಿದೆ. ಭಾರತದಲ್ಲಿ ಇಸ್ಲಾಂನ 'ಶರಿಯಾ ಕಾನೂನು' ಜಾರಿಗೆ ತರಲು ಯತ್ನಿಸುತ್ತಿದ್ದು ಜಿಹಾದ್‌ಗಾಗಿ ಯುವಕರನ್ನು ಒಟ್ಟುಗೂಡಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದಲ್ಲದೆ ಸಿಮಿ ಸಂಘಟನೆಯ ಸದಸ್ಯರು ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕದಲ್ಲಿದೆ. ಇವರು ಉಗ್ರ ಸಂಘಟನೆಗಳೊಂದಿಗೆ ಸೇರಿ ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಮಾಡಲು ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಿದೆ.

Ads on article

Advertise in articles 1

advertising articles 2

Advertise under the article