-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಆನ್ ಲೈನ್ ಆಟದಲ್ಲಿ 15 ಲಕ್ಷ ರೂ. ಕಳೆದುಕೊಂಡು ಫೀಸ್ ಕಟ್ಟಲು ಕಳ್ಳತನಕ್ಕಿಳಿದ ವೈದ್ಯಕೀಯ ವಿದ್ಯಾರ್ಥಿ

ಆನ್ ಲೈನ್ ಆಟದಲ್ಲಿ 15 ಲಕ್ಷ ರೂ. ಕಳೆದುಕೊಂಡು ಫೀಸ್ ಕಟ್ಟಲು ಕಳ್ಳತನಕ್ಕಿಳಿದ ವೈದ್ಯಕೀಯ ವಿದ್ಯಾರ್ಥಿ



ಉತ್ತರಪ್ರದೇಶ: ಲಕ್ಷಾಂತರ ರೂ‌. ಮೌಲ್ಯದ ಚಿನ್ನಾಭರಣ ಕದ್ದಿರುವ ಆರೋಪದಲ್ಲಿ ರಷ್ಯಾ ಮೂಲದ ವೈದ್ಯಕೀಯ ವಿದ್ಯಾರ್ಥಿ ಹಾಗೂ ಆತನ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದಾರೆ.

ವಿದ್ಯಾರ್ಥಿ ರೋಹನ್ ಕುಮಾರ್ ರಷ್ಯಾದಿಂದ ಭಾರತಕ್ಕೆ ಆಗಮಿಸಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದ. ಆದರೆ ತನ್ನ ಸ್ನೇಹಿತ ಅಮಿತ್ ಕುಮಾರ್ ಎಂಬಾತನೊಂದಿಗೆ ಜೊತೆಗೂಡಿ ಆನ್‌ಲೈನ್ ಬೆಟ್ಟಿಂಗ್ ಆಟವಾಡಿ ಕಾಲೇಜ್ ಶುಲ್ಕ ಕಟ್ಟಲು ತಂದಿದ್ದ 15 ಲಕ್ಷ ರೂ. ಕಳೆದುಕೊಂಡಿದ್ದನು. ರೋಹನ್‌ನಿಂದಾಗಿ ಕಳೆದುಕೊಂಡಿದ್ದ ಹಣವನ್ನು ಮರಳಿ ಪಡೆಯಲು 2ನೇ ವರ್ಷದ ಡಿ-ಫಾರ್ಮಸಿ ವಿದ್ಯಾರ್ಥಿಯೊಂದಿಗೆ ರೋಹನ್ ತನ್ನ ನೆರೆಹೊರೆಯವರ ಮನೆಯನ್ನು ದರೋಡೆ ಮಾಡಲು ಮುಂದಾಗಿದ್ದಾನೆ.

ಅದರಂತೆ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ನೆರೆಮನೆಯ ಲಕ್ಷ್ಮೀ ರಾಣಿ ಎಂಬವರ ಮನೆಯಲ್ಲಿ ಕಳ್ಳತನ ನಡೆಸಿದ್ದಾರೆ. ಶಿಕ್ಷಕಿ ಮನೆಗೆ ಹಿಂದಿರಿಗಿದ ವೇಳೆ ಕಳ್ಳತನ ನಡೆದಿರುವುದು ಗೊತ್ತಾಗಿದೆ. ಕೂಡಲೇ ನಗರದ ಕೊತ್ವಾಲಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಮನೆಗೆ ಬಂದು ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಇಬ್ಬರು ಆರೋಪಿಗಳನ್ನು ಗುರುತಿಸಿ, ಬಂಧನಕ್ಕೆ ಬಲೆ ಬೀಸಿದ್ದಾರೆ.

ತನ್ನ ಬಂಧನಕ್ಕೆ ಪೊಲೀಸರು ಮನೆಗೆ ಬರುತ್ತಿದ್ದಾರೆ ಎಂಬುದು ತಿಳಿಯುತ್ತಿದ್ದಂತೆ ರೋಹನ್ ಕದ್ದು ತಂದಿದ್ದ ಚಿನ್ನದ ಸರವನ್ನು ನುಂಗಿದ್ದಾನೆ. ಆದರೆ ಪೊಲೀಸರು ಆತನನ್ನು ಹಿಡಿದು ಆಸ್ಪತ್ರೆಗೆ ಕರೆದೊಯ್ದಿದ್ದು ಎಕ್ಸ್ ರೇ ವರದಿ ತರಿಸಿದ್ದಾರೆ. ಈ ವೇಳೆ ರೋಹನ್ ಹೊಟ್ಟೆಯಲ್ಲಿ ಚಿನ್ನಾಭರಣ ಇರುವುದು ಪತ್ತೆಯಾಗಿದೆ. 

Ads on article

Advertise in articles 1

advertising articles 2

Advertise under the article

ಸುರ