ಮಂಗಳೂರು: ಆಟೊರಿಕ್ಷಾ - ಬೈಕ್ ಢಿಕ್ಕಿ ; ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ದುರ್ಮರಣ
Tuesday, February 21, 2023
ಮಂಗಳೂರು: ನಗರದ ಬಿಜೈನಲ್ಲಿ ಆಟೋರಿಕ್ಷಾ ಹಾಗೂ ಬೈಕ್ ನಡುವೆ ನಡೆದ ನಡೆದ ಭೀಕರ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ದುರ್ಮರಣಕ್ಕೀಡಾದ ಘಟನೆ ಮಂಗಳವಾರ ಮಧ್ಯಾಹ್ನ ಸುಮಾರಿಗೆ ನಡೆದಿದೆ.
ಬಿಜೈ ನಿವಾಸಿ, ನಗರದ ಖಾಸಗಿ ಕಾಲೇಜಿನಲ್ಲಿ ಬಿಬಿಎಂ ವಿದ್ಯಾರ್ಥಿಯಾಗಿರುವ ಕವನ್ ಆಳ್ವ((20) ಮೃತಪಟ್ಟ ದುರ್ದೈವಿ.
ಬಿಜೈ ರಸ್ತೆಯಲ್ಲಿ ರಿಕ್ಷಾವೊಂದು ಟರ್ನ್ ಆಗುತ್ತಿತ್ತು. ಈ ವೇಳೆ ಎದುರಿನಿಂದ ವೇಗವಾಗಿ ಆಗಮಿಸುತ್ತಿದ್ದ ಕವನ್ ಆಳ್ವ ಚಲಾಯಿಸಿಕೊಂಡು ಬರುತ್ತಿದ್ದ ದ್ವಿಚಕ್ರ ವಾಹನವು ಆಟೊರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ದ್ವಿಚಕ್ರ ವಾಹನ ಹಾಗೂ ರಿಕ್ಷಾ ಮಗುಚಿ ಬಿದ್ದಿದ್ದು, ರಸ್ತೆಗೆ ಎಸೆಯಲ್ಪಟ್ಟ ಕವನ್ ಆಳ್ವ ಅಲ್ಲಿಯೇ ಸಮೀಪದಲ್ಲಿದ್ದ ಮರವೊಂದಕ್ಕೆ ಢಿಕ್ಕಿಯಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತದ ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅತಿವೇಗದ ಚಾಲನೆ ಹಾಗೂ ಹೆಲ್ಮೆಟ್ ಧರಿಸದಿರುವುದೇ ಆತನ ಪ್ರಾಣಕ್ಕೆ ಕುತ್ತಾಗಿ ಪರಿಣಮಿಸಿದೆ.
ಈ ಬಗ್ಗೆ ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.