ಟ್ಯಾಂಕರ್ ಗೂಡ್ಸ್ ನಿಂದ ಅನಿಲ ಸೋರಿಕೆ ಗುಮಾನಿ..!ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಾಕ ಅಧಿಕಾರಿಗಳು..!

ಕಡಬ

ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗಿದೆ ಎಂಬ ಗುಮಾನಿಯ ಮೇರೆಗೆ ಅಗ್ನಿಶಾಮಕ ದಳ ಹಾಗೂ ಗ್ಯಾಸ್ ಕಂಪೆನಿಯ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ ಘಟನೆ ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.

ಮಂಗಳೂರಿನಿಂದ ಆಗಮಿಸಿದ್ದ ಗ್ಯಾಸ್ ಟ್ಯಾಂಕರನ್ನು ಹೊತ್ತ ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆಯಾಗುತ್ತಿದೆ ಎಂಬ ಗುಮಾನಿ ಎದ್ದಿದ್ದು, ಪೂರಕವೆಂಬಂತೆ ಪರಿಸರದಲ್ಲಿ ಗ್ಯಾಸ್ ವಾಸನೆ ಬಂದಿತ್ತೆನ್ನಲಾಗಿದೆ‌. ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪುತ್ತೂರಿನಿಂದ ಹಾಗೂ ಸುಳ್ಯದಿಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತಗೊಂಡ ಅನಿಲ ಕಂಪೆನಿಯು ಎಮರ್ಜೆನ್ಸಿ ರೆಸ್ಪಾನ್ಸ್ ತಂಡವನ್ನು ಸ್ಥಳಕ್ಕೆ ಕಳುಹಿಸಿದೆ. ಈ ನಡುವೆ ದಕ್ಷಿಣ ಕನ್ನಡ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಭರತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಾವುದೇ ಲೀಕೇಜ್ ಪತ್ತೆಯಾಗಿಲ್ಲ.
BREAKING NEWS
Loading latest news...
Join our WhatsApp Channel Powered By : Online Pudu