ಕ್ರಿಕೆಟ್ ಪಂದ್ಯಾಟದ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ ಯುವಕರಿಬ್ಬರ ಕೊಲೆಯಲ್ಲಿ ಅಂತ್ಯ



ದೊಡ್ಡಬಳ್ಳಾಪುರ: ಕ್ರಿಕೆಟ್ ಆಟದ ವೇಳೆ ಕ್ಷುಲ್ಲಕ ಕಾರಣಕ್ಕೆ ಸಂಭವಿಸಿರುವ ಜಗಳ ಇಬ್ಬರ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ಶುಕ್ರವಾರ ವರದಿಯಾಗಿದೆ.

ಭರತ್ ಹಾಗೂ ಪ್ರತೀಕ್ ಕೊಲೆಯಾದ ಯುವಕರು.

ದೊಡ್ಡಬೆಳವಂಗಲ ಗ್ರಾಮದಲ್ಲಿ ಶುಕ್ರವಾರ  ಕ್ರಿಕೆಟ್ ಪಂದ್ಯಾಟ ಆಯೋಜನೆಯಾಗಿತ್ತು. ಆದರೆ ಕ್ರಿಕೆಟ್ ಆಟದ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದೊದೆ. ಈ ಜಗಳದಲ್ಲಿ ಭರತ್ ಹಾಗೂ ಪ್ರತೀಕ್‌ಗೆ ಚಾಕುವಿನಿಂದ ಇರಿಯಲಾಗಿದೆ ಎನ್ನಲಾಗಿದ್ದು, ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ, ಪರಿಶೀಲನೆ ನಡೆಸಿದ್ದು, ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
BREAKING NEWS
Loading latest news...
Join our WhatsApp Channel Powered By : Online Pudu