ಉಳ್ಳಾಲ: ಕೀಟನಾಶಕ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿ ಮೃತ್ಯು
Monday, February 20, 2023
ಉಳ್ಳಾಲ: ಕೀಟನಾಶಕ ಸೇವನೆ ಮಾಡಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ರವಿವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಕುಂಪಲ ಆಶ್ರಯ ಕಾಲನಿ ನಿವಾಸಿ ತಮಿಳುನಾಡು ಮೂಲದ ಸೋಮನಾಥ ಮತ್ತು ಭವ್ಯಾ ದಂಪತಿಯ ಹಿರಿಯ ಪುತ್ರಿ ಧನ್ಯಾ (17) ಮೃತಪಟ್ಟ ವಿದ್ಯಾರ್ಥಿನಿ. ಈಕೆ ನಗರದ ಖಾಸಗಿ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ರಜಾ ದಿನದಂದು ಮನೆಯಲ್ಲಿ ಹೇಳದೆ ತೆರಳಿದ್ದ ಧನ್ಯಾರಿಗೆ ತಾಯಿ ಗದರಿಸಿ ಹೊಡೆದಿದ್ದರು. ಇದರಿಂದ ಮನನೊಂದು ಆಕೆ ಕೀಟನಾಶಕ ಸೇವಿಸಿ ಅಸ್ವಸ್ಥರಾಗಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಆದರೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಮೃತಪಟ್ಟಿದ್ದಾರೆ.