ಜಿಮ್ ನಲ್ಲಿ ವರ್ಕ್ ಔಟ್ ಮಾಡುತ್ತಿರುವಾಗಲೇ ಕಾನ್‌ಸ್ಟೇಬಲ್ ಹೃದಯಾಘಾತದಿಂದ ಸಾವು


ಆಂಧ್ರಪ್ರದೇಶ: ಇತ್ತೀಚೆಗೆ ಏಕಾಏಕಿ ಹೃದಯಾಘಾತದಿಂದ ಮೃತಪಡುವವರ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಈ ಸಾಲಿಗೆ ಪೊಲೀಸ್ ಕಾನ್ ಸ್ಟೇಬಲ್ ಒಬ್ಬರು ಸೇರಿದ್ದಾರೆ‌. ವಿಶಾಲ್ (24) ಎಂಬ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರು ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿರುವಾಗಲೇ ಹಠಾತ್ ಆಗಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. 

ವಿಶಾಲ್ ಅವರು ಹೈದರಾಬಾದ್‌ನ ಆಸಿಫ್ ನಗರದ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಜಿಮ್‌ನಲ್ಲಿ ಪುಶ್-ಅಪ್ ತೆಗೆಯುತ್ತಿರಬೇಕಾದರೆ ಹಠಾತ್ ಆಗಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಅವರು ಕುಸಿದು ಬಿದ್ದಿರುವ ವೀಡಿಯೋ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ಈ ವೀಡಿಯೋ ಇದೀಗ ಟ್ವಿಟರ್‌ನಲ್ಲಿ ವೈರಲ್ ಆಗುತ್ತಿದೆ.

 ವೈರಲ್ ಆಗಿರುವ ವೀಡಿಯೋದಲ್ಲಿ ವಿಶಾಲ್ ಪುಶ್-ಅಪ್ ತೆಗೆಯುತ್ತಿದ್ದಾಗ ಕುಸಿದು ಬೀಳುವುದನ್ನು ಗಮನಿಸಬಹುದು. ಈ ವೇಳೆ ಜಿಮ್‌ನಲ್ಲಿದ್ದ ಕೆಲ ಯುವಕರು ವಿಶಾಲ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಪರೀಕ್ಷಿಸಿದ ವೈದರು ಮೃತಪಟ್ಟಿರುವುದುನ್ನು ಖಚಿತ ಪಡಿಸಿದ್ದಾರೆ. ವಿಶಾಲ್ ಸಾವಿಗೆ ಹೃದಯಾಘಾತ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ.
BREAKING NEWS
Loading latest news...
Join our WhatsApp Channel Powered By : Online Pudu