-->
ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ: ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು ಮೃತದೇಹ

ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ: ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು ಮೃತದೇಹ


ಉತ್ತರಕನ್ನಡ: ರಾಜ್ಯದಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂದು ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡುವಳ್ಳಿ ಗ್ರಾಮದಲ್ಲಿ ನಡೆದಿದೆ. ದುಷ್ಕರ್ಮಿಗಳ ಕ್ರೌರ್ಯಕ್ಕೆ ಬಲಿಯಾದ ನಾಲ್ವರ ಮೃತದೇಹವು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ಶಂಭು ಭಟ್ (65), ಅವರ ಪತ್ನಿ ಮಾದೇವಿ ಭಟ್ (40), ಪುತ್ರ ರಾಜೀವ್ ಭಟ್ (34) ಹಾಗೂ ಸೊಸೆ ಕುಸುಮಾ ಭಟ್ (30) ಕೊಲೆಯಾದವರು. ನಾಲ್ವರನ್ನೂ ಕತ್ತಿಯಿಂದ ಕಡಿದು ಹತಗಯೆ ಮಾಡಲಾಗಿದೆ.

ಸ್ಥಳಕ್ಕೆ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರ ಧಾವಿಸಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದ್ದು, ತನಿಖೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗವಾಗಬೇಕಿದೆ.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article