ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ: ಬಾಲ್ಯ ವಿವಾಹವಾದ ಯುವಕ ಅರೆಸ್ಟ್
Wednesday, February 22, 2023
ಬೇಗೂರು (ಹಾಸನ): ಅಪ್ರಾಪ್ತೆಯನ್ನು ಪ್ರೀತಿಸಿ, ಆಕೆಯನ್ನು ಬಾಲ್ಯವಿವಾಹವಾಗಿ ಮಗುವಿಗೆ ಜನ್ಮನೀಡಲು ಕಾರಣನಾದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಗುಂಡ್ಲುಪೇಟೆ ತಾಲೂಕಿನ ಗ್ರಾಮವೊಂದರ ನಿವಾಸಿ ಮಹಾದೇವ ಸ್ವಾಮಿ (26) ಬಂಧಿತ ಆರೋಪಿ.
ಮಹಾದೇವ ಸ್ವಾಮಿ 17 ವರ್ಷ 2 ತಿಂಗಳಾಗಿರುವ ಬಾಲಕಿಯನ್ನು ಪ್ರೀತಿಸಿ ವಿವಾಹವಾಗಿದ್ದ. ಆ ಬಳಿಕ ಆಕೆ ಗರ್ಭಿಣಿಯಾಗಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಶಿಶುವಿಗೆ ಜನ್ಮ ನೀಡಿದ್ದಾಳೆ. ಈ ಬಗ್ಗೆ ಗುಂಡ್ಲುಪೇಟೆ ಸಿಡಿಪಿಒ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದು ಮಹದೇವಸ್ವಾಮಿ ವಿರುದ್ಧ ಬೇಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪೊಲೀಸರು ಮಹಾದೇವ ಸ್ವಾಮಿಯನ್ನು ಬಂಧಿಸಿ ಪೊಕ್ಸೊ ಕಾಯ್ದೆಯಡಿ ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.