ಮಂಗಳೂರು: ವಿಮಾನ ನಿಲ್ದಾಣದಲ್ಲಿ 'ಕಬಾಲಿ' ರಜನಿಕಾಂತ್


ಮಂಗಳೂರು: ನಗರದ ವಿಮಾನ ನಿಲ್ದಾಣದಲ್ಲಿ ‌ಕಬಾಲಿ ಸೂಪರ್ ಸ್ಟಾರ್ ರಜನಿಕಾಂತ್ ಕಾಣ ಸಿಕ್ಕಿದ್ದಾರೆ.

ರವಿವಾರ ರಾತ್ರಿ 9ಗಂಟೆ ಸುಮಾರಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು, ಅಭಿಮಾನಿಗಳತ್ತ ಕೈ ಬೀಸಿದರು. ಆ ಬಳಿಕ ಕಾರಿನಲ್ಲಿ ತೆರಳಿದ್ದಾರೆ.

'ಜೈಲರ್' ಎಂಬ ಸಿನಿಮಾ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಅವರು ಮಂಗಳೂರಿನ ಹೊರವಲಯದಲ್ಲಿರುವ ಪಿಲಿಕುಳ ನಿಸರ್ಗಧಾಮಕ್ಕೆ ಆಗಮಿಸಿದ್ದರೆನ್ನಲಾಗಿದೆ. ಕರಾವಳಿಯಲ್ಲಿ ಎರಡು ದಿನಗಳ ಸಿನಿಮಾ ಶೂಟಿಂಗ್ ನಲ್ಲಿ ರಜನಿಕಾಂತ್ ಭಾಗವಹಿಸಲಿದ್ದಾರೆ. ಅಲ್ಲದೆ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಕೂಡಾ ಈ‌ ಸಿನಿಮಾದಲ್ಲಿ ನಟಿಸುತ್ತಿದ್ದು, ಇಂದು ಅವರು ಚಿತ್ರೀಕರಣ ತಂಡವನ್ನು ಸೇರಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.