ಅಪ್ರಾಪ್ತೆಯ ಮೃತದೇಹ ತಪಾಸಣೆ ವೇಳೆ ಸಿಕ್ಕಿಬಿದ್ದ ಕಾಮುಕ: ಈತನ ಘೋರ ಕೃತ್ಯ ತನಿಖೆಯಿಂದ ಬಯಲು



ಮಲಪ್ಪುರಂ: ಸಂಬಂಧಿ ಯುವಕನಿಂದ ನಿರಂತರ ಅತ್ಯಾಚಾರಕ್ಕೆ ಒಳಗಾದ ಅಪ್ರಾಪ್ತಯೊಬ್ಬಳು ಮನನೊಂದು ಸಾವಿನ ಹಾದಿ ಹಿಡಿದಿರುವ ಹೃದಯವಿದ್ರಾವಕ ಘಟನೆ ಕೇರಳದ ಮೆಲತ್ತೂರಿನಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಚೆರ್ಪಲಸ್ಸೆರಿಯಲ್ಲಿರುವ ನೆಲ್ಲಯಾ ಪೊಟ್ಟಚಿರಾ ಮೂಲದ ನಿವಾಸಿ ಮುಹಮ್ಮದ್ ರಫೀಕ್ (21) ಬಂಧಿತ ಆರೋಪಿ. ಈತ 13 ವರ್ಷದ ತನ್ನ ಸಂಬಂಧಿ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ.

ಸಂತ್ರಸ್ತ ಅಪ್ರಾಪ್ತೆ ಜ.12ರಂದು ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆರಂಭದಲ್ಲಿ ಇದೊಂದು ಅಸಹಜ ಸಾವು ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆದಿರುವುದು ಬಯಲಾಗಿತ್ತು. ಆ ಬಳಿಕ ಪ್ರಕರಣ ತಿರುವು ಪಡೆದುಕೊಂಡಿದ್ದು, ಪೊಲೀಸರು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ ಬಳಿಕ ಪೊಲೀಸರು ತನಿಖೆ ನಡೆಸಿದಾಗ ಆರೋಪಿ ಸಿಕ್ಕಿಬಿದ್ದಿದ್ದಾನೆ.

ಆರೋಪಿ ರಫೀಕ್ ಯಾವಾಗಲೂ ಬಾಲಕಿಯ ಮನೆಗೆ ಬರುತ್ತಿದ್ದ. ಈ ವೇಳೆ ಆತ ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇದರಿಂದ ಮನನೊಂದು ಬಾಲಕಿ ಸಾವಿನ ಹಾದಿ ಹಿಡಿದಿದ್ದಾಳೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಪೊಲೀಸರು ಆತನನ್ನು ತಮ್ಮ ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.
BREAKING NEWS
Loading latest news...
Join our WhatsApp Channel Powered By : Online Pudu