ಚರಂಡಿಯಡಿಯಲ್ಲಿ 10 ಅಡಿ‌ ಕನ್ನ ಕೊರೆದು ಮಳಿಗೆಯಿಂದ ಚಿನ್ನಾಭರಣ ದೋಚಿದ ದರೋಡೆಕೋರರು


ಮೀರತ್: ಚಿನ್ನಾಭರಣ ಮಳಿಗೆಗೆ ಚರಂಡಿಯಡಿಯಲ್ಲಿಯೇ 10 ಅಡಿ ಕನ್ನ ಕೊರೆದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿರುವ ಘಟನೆ ಉತ್ತರಪ್ರದೇಶದ ಮೀರತ್‌ನಲ್ಲಿ ನಡೆದಿದೆ.

ಮಂಗಳವಾರ ಬೆಳಗ್ಗೆ ಎಂದಿನಂತೆ ಅಂಗಡಿ ಮಾಲಕರು ಮಳಿಗೆಯನ್ನು ತೆರೆದಾಗ ಈ ಘಟನೆ ಬೆಳಕಿಗೆ ಬಂದಿದೆ. ಚಿನ್ನಾಭರಣ ಮಳಿಗೆಯಲ್ಲಿ ಕಳ್ಳತನವಾಗಿರುವ ಸುದ್ಧಿ ಹರಡುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಬುಲಿಯನ್ ಟ್ರೇಡರ್ಸ್ ಅಸೋಸಿಯೇಷನ್ ಸದಸ್ಯರು ಪೊಲೀಸರ ವಿರುದ್ಧ ಘೋಷಣೆಗಳನ್ನ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಸದಸ್ಯರು ನಗರದಲ್ಲಿ ಈ ಮಟ್ಟದಲ್ಲಿ ದರೋಡೆ ನಡೆದಿರುವ ನಾಲ್ಕನೇ ಪ್ರಕರಣವಾಗಿದ್ದು ಇದುವರೆಗೂ ಪೊಲೀಸರು ಯಾರನ್ನು ಬಂಧಿಸಿಲ್ಲ. ಇಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಸಿ ಕಳ್ಳರನ್ನು ಸೆರೆ ಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿ ಒಬ್ಬರು ಕಳ್ಳರು ಚರಂಡಿಯ ಒಂದು ಭಾಗದಿಂದ ಸುರಂಗವನ್ನು ಕೊರೆದು ಅಂಗಡಿಯನ್ನು ದೋಚಿದ್ದಾರೆ. ಕಳ್ಳತನವಾಗಿರುವ ಚಿನ್ನಾಭರಣದ ಒಟ್ಟು ಮೌಲ್ಯದ ಬಗ್ಗೆ ಇನ್ನು ತಿಳಿದು ಬಂದಿಲ್ಲ ಎಂದು ತಿಳಿಸಿದ್ದಾರೆ.

BREAKING NEWS
Loading latest news...
Join our WhatsApp Channel Powered By : Online Pudu