-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಪ್ರಧಾನಿ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ‌: ರಾಹುಲ್ ಗಾಂಧಿಗೆ 2ವರ್ಷ ಜೈಲು‌ ಶಿಕ್ಷೆ

ಪ್ರಧಾನಿ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ‌: ರಾಹುಲ್ ಗಾಂಧಿಗೆ 2ವರ್ಷ ಜೈಲು‌ ಶಿಕ್ಷೆ


ನವದೆಹಲಿ: ಪ್ರಧಾನಿ ಮೋದಿಯವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ದೋಷಿ ಎಂದಿರುವ ಸೂರತ್ ಜಿಲ್ಲಾ ಕೋರ್ಟ್‌ 2 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

ಕಳೆದ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿಯವರು 'ಪ್ರಧಾನಿ ಮೋದಿ ಓರ್ವ ಕಳ್ಳ' ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್‌ ರಾಹುಲ್‌ ದೋಷಿ ಎಂದು ತೀರ್ಪು ನೀಡಿ ಶಿಕ್ಷೆಯ ಪ್ರಮಾಣವನ್ನು ಪ್ರಕಟಿದೆ.

ಈ ತೀರ್ಪು ಪ್ರಕಟವಾಗುವ ಮೊದಲೇ ರಾಹುಲ್‌ ಗಾಂಧಿ ಕೋರ್ಟ್‌ಗೆ ಹಾಜರಾಗಿದ್ದಾರೆ. ಅಲ್ಲದೆ ತೀರ್ಪನ್ನು  ಪ್ರಶ್ನಿಸಿ  ಜಾಮೀನು ಕೋರಿ ರಾಹುಲ್‌ ಗಾಂಧಿ ಪರ ವಕೀಲರು ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.

ನೀರವ್ ಮೋದಿ , ಲಲಿತ್ ಮೋದಿ, ನರೇಂದ್ರ ಮೋದಿ ಇವೆರೆಲ್ಲರ ಸರ್‌ನೇಮ್ ಒಂದೇ ಆಗಿದೆ. ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು. ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿವರು ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್‌ ಮಾನಹಾನಿ ದೂರು ದಾಖಲಿಸಿದ್ದರು.


Ads on article

Advertise in articles 1

advertising articles 2

Advertise under the article

ಸುರ