-->
ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ: 20ಮಂದಿ ಉಮ್ರಾ ಯಾತ್ರಿಗಳು ಬಲಿ

ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ: 20ಮಂದಿ ಉಮ್ರಾ ಯಾತ್ರಿಗಳು ಬಲಿ


ಜಿದ್ದಾ: ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್ ನಲ್ಲಿ ಸಂಚರಿಸುತ್ತಿದ್ದ ಕನಿಷ್ಠ 20 ಮಂದಿ ಉಮ್ರಾ ಯಾತ್ರಿಕರು ದುರ್ಮರಣಕ್ಕೀಡಾಗಿದ್ದಾರೆ. ಅಲ್ಲದೆ 29 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಸೋಮವಾರ ಈ ಪ್ರಯಾಣಿಕ ಬಸ್ ಸೇತುವೆಗೆ ಡಿಕ್ಕಿ ಹೊಡೆದು, ಪಲ್ಟಿಯಾಗಿದೆ. ಈ ವೇಳೆ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ದುರಂತದಲ್ಲಿ 20 ಮಂದಿ ಸಾವನ್ನಪ್ಪಿ 29 ಮಂದಿ ಗಾಯಗೊಂಡಿದ್ದಾರೆ.

ಬ್ರೇಕ್ ವೈಫಲ್ಯಗೊಂಡ ಪರಿಣಾಮ ಈ ಅಪಘಾತವು ಸಂಭವಿಸಿದೆ. ಅಸಿರ್ ಪ್ರಾಂತ್ಯ ಮತ್ತು ಅಭಾ ನಗರವನ್ನು ಸಂಪರ್ಕಿಸುವ ರಸ್ತೆಯಲ್ಲಿ ಸಂಭವಿಸಿದೆ. ಉಮ್ರಾ ನಿರ್ವಹಿಸಲು ಮಕ್ಕಾಗಿ ತೆರಳುತ್ತಿದ್ದಾಗ ಈ ದುಘಟನೆ ನಡೆದಿದೆ. ಸೌದಿ ನಾಗರಿಕ ರಕ್ಷಣಾ ಮತ್ತು ರೆಡ್ ಕ್ರೆಸೆಂಟ್ ಪ್ರಾಧಿಕಾರದ ತಂಡಗಳು ಅಪಘಾತದ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿದೆ.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article