ಅರಸೀಕೆರೆ: ಗೃಹ ಸಚಿವ ಆರಗ ಜ್ಞಾನೇಂದ್ರರ ಬೆಂಗಾವಲು ವಾಹನ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ ಪೊಲೀಸ್ ಠಾಣೆಯ ಬಳಿ ನಡೆದಿದೆ.
ಚಿಕ್ಕಗಂಡಸಿ ಗ್ರಾಮದ ನಿವಾಸಿ ರಮೇಶ್ (45) ಮೃತಪಟ್ಟ ದ್ವಿಚಕ್ರ ವಾಹನ ಸವಾರ.
ಚಾಮನಾಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ಗೃಹ ಸಚಿವರು ಸ್ವಗ್ರಾಮಕ್ಕೆ ತೆರಳುತ್ತಿದ್ದರು. ಈ ಸಂದರ್ಭ ಪೆಟ್ರೋಲ್ ಬಂಕ್‌ನಿಂದ ಪೆಟ್ರೋಲ್ ಹಾಕಿಸಿಕೊಂಡು ಬರುತ್ತಿದ್ದ ಬೈಕ್ ಸವಾರ ಸಚಿವರ ಬೆಂಗಾವಲು ವಾಹನಕ್ಕೆ ದಿಢೀರ್ ಅಡ್ಡ ಬಂದಿದ್ದಾರೆ. ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.