ಮಂಗಳೂರು: ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತಕ್ಕೆ ಮಂಗಳೂರು ಯುವಕ ಬಲಿ



ಮಂಗಳೂರು: ಸೌದಿ ಅರೇಬಿಯಾದ ಜುಬೈಲ್ ನಲ್ಲಿ ಸಂಭವಿಸಿರುವ ರಸ್ತೆ ಅಪಘಾತದಲ್ಲಿ ನಗರದ ಮಲ್ಲೂರು ನಿವಾಸಿ ಸುಲೈಮಾನ್ (35) ಎಂಬವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಸುಲೈಮಾನ್ ಅವರು ರಸ್ತೆ ದಾಟುತ್ತಿದ್ದರು. ಈ ವೇಳೆ ಕಾರೊಂದು ಢಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಸುಲೈಮಾನ್ ಜುಬೈಲ್‌ನ ಲುಮಿನಾಸ್ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರು. ಇಬ್ಬರು ಮಕ್ಕಳಿರುವ ಸುಲೈಮಾನ್ ಎಪ್ರಿಲ್ 20ರಂದು ತಾಯ್ನಾಡಿಗೆ ಬರುವವರಿದ್ದರು. ಆದರೆ ಅಷ್ಟರಲ್ಲಾಗಲೇ ಅವರು ಮರಳಿ ಬಾರದ ಲೋಕಕ್ಕೆ ಪ್ರಯಾಣಿಸಿದ್ದಾರೆ.

BREAKING NEWS
Loading latest news...
Join our WhatsApp Channel Powered By : Online Pudu