ಮಂಗಳೂರು: ಹಲವು ಪ್ರಕರಣಗಳಲ್ಲಿ ಆರೋಪಿಯಾಗಿ ಜಾಮೀನು ಪಡೆದ ಬಳಿಕ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿರುವ ಅಸಾಮಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ನಗರದ ಬಂದರ್ ನಿವಾಸಿ ಅಬ್ದುಲ್ ರಶೀದ್ ಬಂಧಿತ ಆರೋಪಿ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಆರೋಪಿ ಅಬ್ದುಲ್ ರಶೀದ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಈತ ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ, ಪೊಲೀಸರ ಕೈಗೂ ಸಿಗದೆ ತಲೆಮರೆಸಿಕೊಂಡಿದ್ದ. ಇದೀಗ ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿದ್ದಾರೆ.