-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ( CENTRAL BANK OF INDIA) ದ ಕೆಲ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ( CENTRAL BANK OF INDIA) ದ ಕೆಲ ಹುದ್ದೆಗಳಿಗೆ ಅರ್ಜಿ ಆಹ್ವಾನ

 







  ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಕೆಲ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ನಾಲ್ಕು ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್‌ centralbankofindia.co.in ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.


 


ಹುದ್ದೆಗಳ ವಿವರಗಳು:


ಬಿಸಿನೆಸ್ ಕರೆಸ್ಪಾಡೆಂಟ್ ಸುಪ್ರೈಸರ್: 4 ಹುದ್ದೆಗಳು (ರಾಯಪುರ್-1, ಬಿಲಾಸ್ಪುರ್-1, ದುರ್ಗ್-1 ಮತ್ತು ಜಗದಲ್ಪುರ್-1)



ಅರ್ಹತಾ ಮಾನದಂಡಗಳು:


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವೀಧರರಾಗಿರಬೇಕು. M. Sc, BE (IT)/ MCA/MBA ಗೆ ಆದ್ಯತೆ ನೀಡಲಾಗುತ್ತದೆ. ಇದರ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು (MS ಆಫೀಸ್, ಇಮೇಲ್, ಇಂಟರ್ನೆಟ್ ಇತ್ಯಾದಿ) ಹೊಂದಿರಬೇಕು.


ವಯೋಮಿತಿ:


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 21 ರಿಂದ 45 ವರ್ಷದೊಳಗೆ ಇರಬೇಕು


ಆಯ್ಕೆ ಪ್ರಕ್ರಿಯೆ:


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಪ್ರಕ್ರಿಯೆಯ ಮೂಲಕ ಆಯ್ಕೆಯನ್ನು ಮಾಡಲಾಗುತ್ತದೆ.


ಗುತ್ತಿಗೆ ಒಪ್ಪಂದದ ಅವಧಿ:


ಈ ನೇಮಕಾತಿಯು ಗುತ್ತಿಗೆ ಒಪ್ಪಂದದ ಅಡಿಯಲ್ಲಿ ನಡೆಯಲಿದ್ದು, ಅದರಂತೆ ಈ ಒಪ್ಪಂದವು 1 ವರ್ಷದವರೆಗೆ ಇರಲಿದೆ.




ಪ್ರಮುಖ ದಿನಾಂಕ:


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ-  8- 4- 2023


ಅರ್ಜಿ ಸಲ್ಲಿಸುವುದು ಹೇಗೆ?


ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು. ಹಾಗೆಯೇ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಕೂಡ ಕಳುಹಿಸಬಹುದು.


ಅರ್ಜಿ ಕಳುಹಿಸಬೇಕಾದ ವಿಳಾಸ:


Regional Head, Central Bank of India, Regional Office, 1st floor, Bombay Market, G.E. Road, Raipur-492001(C.G.)

Ads on article

Advertise in articles 1

advertising articles 2

Advertise under the article

ಸುರ