ಎಎಪಿ ನಾಯಕನೊಂದಿಗೆ ಕಾಣಿಸಿಕೊಂಡ ಬಾಲಿವುಡ್ ನಟಿ ಪರಿಣೀತಿ ಚೋಪ್ರಾ: ಡೇಟಿಂಗ್ ಗುಮಾನಿ


ಮುಂಬೈ: ಬಾಲಿವುಡ್ ನಟಿ ಪರಿಣೀತಿ ಚೋಪ್ರಾ, ಇತ್ತೀಚೆಗೆ ಆಮ್ ಆದ್ಮಿ ಪಕ್ಷದ ಮುಖಂಡ ರಾಘವ್ ಚಡ್ಡಾರೊಂದಿಗೆ ಮುಂಬೈನಲ್ಲಿ ಕಾಣಿಸಿಕೊಂಡಿದ್ದಾರೆ. ವಿಶೇಷವೆಂದರೆ, ಇವರಿಬ್ಬರೂ ಈ ರೀತಿಯಲ್ಲಿ ಕಾಣಿಸಿಕೊಳ್ಳುತ್ತಿರುವುದು ಇದೇ ಮೊದಲ ಬಾರಿಯಲ್ಲ. ಆಪ್ ನಾಯಕ ರಾಘವ್ ಚಡ್ಡಾರೊಂದಿಗಿದ್ದ ಪರಿಣೀತಿ ಚೋಪ್ರಾರ ಒಂದೆರಡು ವೀಡಿಯೊಗಳು ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು ಅಭಿಮಾನಿಗಳ ವಲಯದಲ್ಲಿ ಅವರಿಬ್ಬರು ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಗುಮಾನಿ ಎದ್ದಿದೆ.

ಮೊನ್ನೆ ರಾತ್ರಿ ಪರಿಣೀತಿ ಚೋಪ್ರಾ ಹಾಗೂ ರಾಘವ್ ಚಡ್ಡಾ ಬಾಸ್ಟಿಯಾನ್ ನಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದರು. ಅಲ್ಲಿಗೆ ಡಿನ್ನರ್ ಡೇಟ್ ಗೆ ಹೋಗಿದ್ದರು ಎನ್ನಲಾಗಿದೆ. ಇವರಿಬ್ಬರು ಡೇಟಿಂಗ್ ನಡೆಸುತ್ತಿದ್ದಾರೆ ಎನ್ನಲು ಇಬ್ಬರೂ ಬಿಳಿ ಬಟ್ಟೆಯಲ್ಲಿ ಕಾಣಿಸಿಕೊಂಡಿದ್ದರು ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಇಬ್ಬರೂ ನಿಕಟತೆಯಿಂದ ವರ್ತಿಸಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಇದಕ್ಕೂ ಮೊದಲು, ಪರಿಣೀತಿ ಚೋಪ್ರಾ ಮತ್ತು ರಾಘವ್ ಚಡ್ಡಾ ಒಟ್ಟಿಗೆ ಕಾಣಿಸಿಕೊಂಡಿದ್ದಾಗ ಅವರು ಪಾಪರಾಜಿಗಳ ಕಣ್ಣಿಗೆ ಬಿದ್ದಿದ್ದರು.

ಆದರೆ ಸುದ್ದಿ ಸಂಸ್ಥೆಯೊಂದು ನಡೆಸಿದ್ದ ಫ್ಯಾಕ್ಟ್ ಚೆಕ್ ಕಾರ್ಯದಲ್ಲಿ ತಿಳಿದು ಬಂದದ್ದೇನೆಂದರೆ, ಅವರಿಬ್ಬರೂ ಲಂಡನ್ ಸ್ಕೂಲ್ ಆಫ್ ಇಕನಾಮಿಕ್ಸ್ ನಲ್ಲಿ ಜತೆಗೆ ಓದಿದ್ದರು. ಹಾಗಾಗಿ ಅವರಿಬ್ಬರೂ ಉತ್ತಮ ಸ್ನೇಹಿತರು ಎಂದು ತಿಳಿದು ಬಂದಿದೆ. 

BREAKING NEWS
Loading latest news...
Join our WhatsApp Channel Powered By : Online Pudu