-->
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ತೀವ್ರ ಹೃದಯಾಘಾತದಿಂದ ವಿಧಿವಶ

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ತೀವ್ರ ಹೃದಯಾಘಾತದಿಂದ ವಿಧಿವಶ


ಮೈಸೂರು: ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ತೀವ್ರ ಹೃದಯಾಘಾತದಿಂದ ಮೈಸೂರಿನ ಡಿಆರ್‌ಂ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಆರ್.ಧ್ರುವನಾರಾಯಣ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರಾಗಿದ್ದು, ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. 2004ರಲ್ಲಿ ಸಂತೇಮರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕೇವಲ ಒಂದು ಮತದ ಅಂತರದಲ್ಲಿ ಗೆಲುವು ಸಾಧಿಸಿದ್ದರು.

2008ರಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಆರ್.ಧ್ರುವನಾರಾಯಣ್ ಅವರು 2009 ರಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು. 2014ರಲ್ಲೂ ಕೂಡ ಗೆಲುವು ಪಡೆದಿದ್ದರು. ಆದರೆ, 2018ರಲ್ಲಿ ಶ್ರೀನಿವಾಸ್ ಪ್ರಸಾದ್ ವಿರುದ್ಧ ಸೋಲು ಕಂಡಿದ್ದರು. ಸೋಲಿನ ಬಳಿಕವೂ ಬಹಳ ಕಾರ್ಯೋನ್ಮುಖರಾಗಿದ್ದ ಧ್ರುವನಾರಾಯಣ್ ಈ ವಿಧಾನಸಭಾ ಚುನಾವಣೆಗೆ ನಂಜನಗೂಡು ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದರು.

ಸಂಸದರಾಗಿದ್ದ ವೇಳೆ ಅನುದಾನ ಬಳಕೆ ವಿಚಾರದಲ್ಲೂ ಉತ್ತಮ ಹೆಸರು ಪಡೆದಿದ್ದರು. ಅಲ್ಲದೆ, ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿಗಳ ವಿಚಾರದಲ್ಲೂ ಉತ್ತಮ ಹೆಸರು ಪಡೆದಿದ್ದರು.

Ads on article

  

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article