ಕರ್ನಾಟಕ ವಿಧಾನಸಭಾ ELECTION- ಇಂದು ದಿನಾಂಕ ಘೋಷಣೆ


ಇಂದು ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಚುನಾವಣಾ ಆಯೋಗವು  ಘೋಷಣೆ ಮಾಡಲಿದೆ. ಇಂದು ಬೆಳಗ್ಗೆ 11.30ರ ವೇಳೆಗೆ ಚುನಾವಣಾ ದಿನಾಂಕ ಘೋಷಣೆಯಾಗಲಿದೆ.

ಇಂದು ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡುವ ಸಂಬಂಧ ಪತ್ರಿಕಾಗೋಷ್ಠಿಯನ್ನು ಕರೆದಿದೆ. ಬೆಳಗ್ಗೆ 11.30ರ ವೇಳೆಗೆ ಚುನಾವಣಾ ದಿನಾಂಕ ಘೋಷಣೆಯಾಗಲಿದೆ.

ಚುನಾವಣಾ ಆಯೋಗ ಹಾಗೂ ರಾಜ್ಯ ಸರ್ಕಾರದ ಉನ್ನತ ಮೂಲಗಳ ಪ್ರಕಾರ, ಚುನಾವಣಾ ಅಧಿಸೂಚನೆ ಪ್ರಕಟಿಸುವುದಕ್ಕೆ ಅಗತ್ಯವಾದ ಎಲ್ಲ ಸಿದ್ಧತೆಗಳನ್ನು ಕೇಂದ್ರ ಚುನಾವಣಾ  ಆಯೋಗವು ಪೂರ್ಣಗೊಳಿಸಿದೆ.

ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್‌ ಕುಮಾರ್‌ ಅವರು ದೆಹಲಿಯ ವಿಜ್ಞಾನ ಭವನದ ಕಚೇರಿಯಲ್ಲಿ ಬೆಳಗ್ಗೆ 11:30 ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಅವರು ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ವಿಧಾನ ಸಭಾ ಚುನಾವಣಾ ದಿನಾಂಕವನ್ನು ನಿಗದಿಪಡಿಸಲಿದ್ದಾರೆ.ಇಂದು ವೇಳಾಪಟ್ಟಿ ಘೋಷಣೆಯಾದರೆ, ತಕ್ಷಣವೇ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ.