ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ: ದಂಪತಿ ಸಜೀವ ದಹನ


ಯಾದಗಿರಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ನಿಂದ ಮನೆಯೊಳಗಿದ್ದ ದಂಪತಿ ಸಜೀವ ದಹನವಾದ ದಾರುಣ ದುರಂತವೊಂದು ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ನಡೆದಿದೆ.

ಮನೆಯಲ್ಲಿದ್ದ ಪತಿ ಕೆ.ಬಿ.ರಾಘವೇಂದ್ರ (39) ಮತ್ತು ಪತ್ನಿ ಶಿಲ್ಪಾ ರಾಘವೇಂದ್ರ (32) ಈ ದುರಂತದಲ್ಲಿ  ಮೃತಪಟ್ಟವರು.

ದಂಪತಿ ಬಟ್ಟೆ ಅಂಗಡಿ ವ್ಯಾಪಾರಿಗಳಾಗಿದ್ದ ಇವರು ಮನೆಯ ಮೂರು ಮಹಡಿಗಳ ಪೈಕಿ ಎರಡರಲ್ಲಿ ಬಟ್ಟೆಯಂಗಡಿಯಿದ್ದು, ಒಂದು ಮಹಡಿಯಲ್ಲಿ ವಾಸ್ತವ್ಯವಿದ್ದರು. ಎಂದಿನಂತೆ ವ್ಯಾಪಾರ ವ್ಯವಹಾರ ಮುಗಿಸಿ ಮನೆಯಲ್ಲಿ ಮಲಗಿದ್ದರು.‌ಈ ವೇಳೆ ರವಿವಾರ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಹಾಗೂ ಬಟ್ಟೆ ಅಂಗಡಿಯಲ್ಲಿ ಬೆಂಕಿ ಅವಘಢ ಸಂಭವಿಸಿದೆ.

ಸೋಮವಾರ ಬೆಳಗಿನ ಜಾವ 5 ಗಂಟೆಗೆ ಬೆಂಕಿ ಅವಘಡ ಸಂಭವಿಸಿರುವುದು ಸಾರ್ವಜನಿಕರ ಗಮನಕ್ಕೆ ಬಂದಿದೆ. ಈ ವೇಳೆ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಬಟ್ಟೆಗಳು ಸಂಪೂರ್ಣವಾಗಿ ಸುಟ್ಟು ಬೂದಿಯಾಗಿರುವುದು ಕಂಡು ಬಂದಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಆದರೆ ಈ ದುರಂತದಲ್ಲಿ ದಂಪತಿ ಸಜೀವ ದಹನಗೊಂಡಿದ್ದಾರೆ. ಈ ಬಗ್ಗೆ ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BREAKING NEWS
Loading latest news...
Join our WhatsApp Channel Powered By : Online Pudu