ಕಿನ್ನಿಗೋಳಿ: ಜ್ವರದಿಂದ ಬಳಲುತ್ತಿದ್ದ ಎಸ್ಎಸ್ಎಲ್ ಸಿ ವಿದ್ಯಾರ್ಥಿ ಸಾವು


ಕಿನ್ನಿಗೋಳಿ: ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕನೋರ್ವನು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಕಿನ್ನಿಗೋಳಿಯ ಪಕ್ಷಿಕೆರೆ ಎಂಬಲ್ಲಿ ಸಂಭವಿಸಿದೆ.

ಪಕ್ಷಿಕೆರೆಯ ಜುಮ್ಮಾ ಮಸೀದಿ ಬಳಿಯ ನಿವಾಸಿ ಎಸ್ಎಸ್ಎಲ್ ಸಿ ವಿದ್ಯಾರ್ಥಿ ಹಿಲಾಲ್(16) ಮೃತಪಟ್ಟ ಬಾಲಕ.

ಹಿಲಾಲ್ ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ. ಆತನನ್ನು ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕ‌ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
BREAKING NEWS
Loading latest news...
Join our WhatsApp Channel Powered By : Online Pudu