-->
1000938341
ಬೆಳ್ತಂಗಡಿ: ನೀತಿಸಂಹಿತೆ ಉಲ್ಲಂಘನೆ - ಶಾಸಕ ಹರೀಶ್ ಪೂಂಜ ವಿರುದ್ಧ ಚುನಾವಣಾಧಿಕಾರಿಗೆ ಪ್ರತ್ಯೇಕ ದೂರು

ಬೆಳ್ತಂಗಡಿ: ನೀತಿಸಂಹಿತೆ ಉಲ್ಲಂಘನೆ - ಶಾಸಕ ಹರೀಶ್ ಪೂಂಜ ವಿರುದ್ಧ ಚುನಾವಣಾಧಿಕಾರಿಗೆ ಪ್ರತ್ಯೇಕ ದೂರು


ಬೆಳ್ತಂಗಡಿ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆಂದು  ಸಿಪಿಐಎಂ ಮುಖಂಡ ಶೇಖರ್ ಲಾಯಿಲ ಬೆಳ್ತಂಗಡಿ ಚುನಾವಣಾಧಿಕಾರಿಗಳಿಗೆ ಎರಡು ಪ್ರತ್ಯೇಕ ದೂರು ನೀಡಿದ್ದಾರೆ.ಹರೀಶ್ ಪೂಂಜ ಅವರು ನೀತಿ ಸಂಹಿತೆ ಉಲ್ಲಂಘಿಸಿ ಪತ್ರಿಕೆಗೆ ಹಣ ಪಾವತಿಸಿ ಮಾ.30ರಂದು ದಿನಪ್ರತಿಕೆಯೊಂದರಲ್ಲಿ  ಅಕ್ರಮ ಸಕ್ರಮ ಯೋಜನೆಯನ್ನು ಶಾಸಕರ ಸಾಧನೆಯಂತೆ  ಪತ್ರಿಕೆಯೊಂದರ ಕೊನೆಯ ಪೂರ್ಣ ಪುಟದಲ್ಲಿ ವರದಿ ಪ್ರಕಟಿಸಿದ್ದಾರೆ. ಇದು ಮತದಾರರ ಮೇಲೆ ಪ್ರಭಾವ ಬೀರುವಂತಿದೆ. ಈ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿ ಬೆಳ್ತಂಗಡಿ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.ಅಲ್ಲದೆ ಬೆಳ್ತಂಗಡಿ ತಾಲೂಕಿನ ಕಾಶಿಪಟ್ಟದಲ್ಲಿ ನಡೆದ ಗ್ರಾಮವಿಕಾಸ ಹಬ್ಬದ ಹೆಸರಿನಲ್ಲಿ ಮಾ.30 ರಂದು ಸಂಜೆ 7 ರಿಂದ ರಾತ್ರಿ 12:25 ರವರೆಗೆ ಬಲಿಂಜೆಯಲ್ಲಿ ಸಭಾ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದ ವೇಳೆ ಊಟೋಪಾಚಾರವನ್ನು ಮತದಾರರಿಗೆ ನೀಡಲಾಗಿತ್ತು. ಇದರಲ್ಲಿ ಶಾಸಕ ಹರೀಶ್ ಪೂಂಜ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಭಾಗವಹಿಸಿದ್ದರು‌. ಆದ್ದರಿಂದ ಕಾರ್ಯಕ್ರಮಲ್ಲಿ ಮತದಾರರನ್ನು ಸೆಳೆಯುವ ಉದ್ದೇಶದಿಂದ ಊಟೋಪಚಾರವನ್ನು ಹಂಚಲಾಗಿದೆ.

ಜೊತೆಗೆ ರಾತ್ರಿ 10 ಗಂಟೆಗೆ ಧ್ವನಿವರ್ಧಕ ಪರವಾನಿಗೆ ಪಡೆದು ಮಧ್ಯರಾತ್ರಿ 12:25 ರ ತನಕ ಕಾನೂನು ಬಾಹಿರ ಸಭಾ ಕಾರ್ಯಕ್ರಮ ಮಾಡಲಾಗಿದೆ. ಇದು ಚುನಾವಣಾ ಮಾದರಿ ನೀತಿ ಸಂಹಿತೆ ಸ್ಪಷ್ಟವಾಗಿ ಉಲ್ಲಂಘನೆ ಮಾಡಲಾಗಿದೆ. ಈ ಕಾರ್ಯಕ್ರಮದ ಆಯೋಜಕರು, ಭಾಗವಹಿಸಿದ್ದ ಬಿಜೆಪಿ ಪಕ್ಷದ ನಾಯಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶೇಖರ ಲಾಯಿಲ ಅವರು ಬೆಳ್ತಂಗಡಿಯ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಎರಡು ಪ್ರತ್ಯೇಕ ದೂರಿನ ಬಗ್ಗೆ ಪರಿಶೀಲನೆ ಮಾಡಿದ ಬಳಿಕ ಎಫ್.ಐ.ಆರ್ ದಾಖಲಿಸಿಕೊಳ್ಳುವುದಾಗಿ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ ಎಂದು ಶೇಖರ್ ಲಾಯಿಲ ಅವರು ಮಾಹಿತಿ ನೀಡಿದ್ದಾರೆ.

Ads on article

Advertise in articles 1

advertising articles 2

Advertise under the article